ರಸ್ತೆ ಸಮಗ್ರ ಅಭಿವೃದ್ಧಿಗೆ ದೊರೆತ ಅನುಮೋದನೆ
ಕುಣಿಗಲ್: ತಾಲೂಕಿನ ಗಡಿ ಗ್ರಾಮಗಳಿಂದ ರಾಜ್ಯ ಹೆದ್ದಾರಿ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯ ಸಂಪರ್ಕ ಕಲ್ಪಿಸುವ ಸಂಪರ್ಕ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಮೊದಲ ಹಂತದಲ್ಲಿ ಈಗಾಗಲೆ 32 ಕೋಟಿ ರು.ವೆಚ್ಚದಲ್ಲಿ 24 ಕಿಮಿ ಉದ್ದದ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಟೆಂಡರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಂಡು ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಶಾಸಕ ಡಿ.ನಾಗರಾಜಯ್ಯ ತಿಳಿಸಿದರು. ತಾಲೂಕಿನ ಹುತ್ರಿದುರ್ಗ ಹೋಬಳಿಯ ಹಂದಲಗೆರೆ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ವಿಶೇಷ ಅಭಿವೃದ್ಧಿ ಯೋಜನೆಯ ಅನುದಾನದಡಿಯಲ್ಲಿ 79 ಲಕ್ಷ ರು.ವೆಚ್ಚದಲ್ಲಿ ಸಂಪರ್ಕರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಈ ರಸ್ತೆಯ ಅಭಿವೃದ್ಧಿಯಿಂದಾಗಿ ಮಾಗಡಿ, ಚನ್ನಪಟ್ಟಣ, ಮದ್ದೂರು, ರಾಮನಗರ ತಾಲೂಕಿನ ರಸ್ತೆ ಸಂಪರ್ಕ ಉತ್ತಮಗೊಂಡು ಜನತೆಗೆ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ಉಜ್ಜಿನಿ ಸೇರಿದಂತೆ ತಾವರೆಕೆರೆ, ಚೌಡನಕುಪ್ಪೆ ಮಾರ್ಗವಾಗಿ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಮೂಲಕ ತಾಲೂಕಿನ ಗಡಿಭಾಗದ ಗ್ರಾಮಗಳು ಅಭಿವೃದ್ಧಿಗೊಳ್ಳಲು ಸಹಕಾರಿಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದೆಂದರು. ಜಿಪಂ ಸದಸ್ಯ ವೈ.ಎಚ್. ಹುಚ್ಚಯ್ಯ, ತಾಲೂಕಿನಲ್ಲಿ 16ಕಿಮಿ ರಾಷ್ಟ್ರೀಯ ಹೆದ್ದಾರಿ, 126ಕಿಮಿ ರಾಜ್ಯ ಹೆದ್ದಾರಿ ಹಾಗೂ 426 ಕಿಮಿ ಲೋಕೋಪಯೋಗಿ ಇಲಾಖೆ ರಸ್ತೆಗಳಿದ್ದು, ಇವುಗಳ ಪೈಕಿ ಬಹುತೇಕ ಮೇಲ್ದರ್ಜೆಗೇರಿಸುವುದು ಸೇರಿದಂತೆ ಅಭಿವೃದ್ಧಿ ಕಾಮಗಾರಿಗೆ ಸಾಕಷ್ಟು ಅನುದಾನದ ಕೊರತೆ ಇರುವ ಕಾರಣ ರಸ್ತೆಗಳ ಅಭಿವೃದ್ಧಿ ಕಾರ್ಯವಿಳಂಬವಾಗುತ್ತಿದ್ದು, ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಿ ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವುದು ಸ್ವಾಗತಾರ್ಹ ಎಂದರು. ಜಿಪಂ ಸದಸ್ಯೆ ಡಾ.ಬಿ.ಎನ್. ರವಿ, ತಾವರೆಕೆರೆ ಗ್ರಾಪಂ ಅಧ್ಯಕ್ಷ ಕೆ.ಕುಮಾರ್, ತಹಸೀಲ್ದಾರ್ ಪುಟ್ಟನರಸಯ್ಯ, ಲೋಕೋಪಯೋಗಿ ಇಲಾಖೆ ಎಇಇ ಲಕ್ಷ್ಮೀಪ್ರಸನ್ನ, ಜೆಇ ಬೋರೇಗೌಡ, ಜಿಪಂ ಎಇಇ ಸಣ್ಣಮರಿಗೌಡ, ಮುಖಂಡ ಕೆ.ರಮೇಶ, ಸಿದ್ದಲಿಂಗಪ್ಪ ಸೇರಿದಂತೆ ಇಕರರು ಉಪಸ್ತಿತರಿದ್ದರು.
ಇಂದು ವಿಶ್ವ ಅಂಗವಿಕಲ ದಿನಾಚರಣೆ
ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಮಂಗಳವಾರ ಬೆಳಿಗ್ಗೆ 10ಗಂಟೆಗೆ ಸರ್ವ ಶಿಕ್ಷಣ ಅಭಿಯಾನದ ವತಿಯಿಂದ ವಿಶ್ವ ಅಂಗವಿಲಕರ ದಿನಾಚರಣೆ ಮತ್ತು 6-14 ವಯೋವಾನದ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಕ್ರೀಡಾ ಮತ್ತು ಸಾಂಸ್ಕೃತಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

