ಶ್ರದ್ಧೆಯಿಂದ ಕೆಲಸ ಮಾಡಿದರೆ ಹುದ್ದೆ ಖಚಿತ
ತುಮಕೂರು: ಶ್ರದ್ಧೆ ಮತ್ತು ನಿಷ್ಠೆಯಿಂದ ಪಕ್ಷದ ಕೆಲಸ ಮಾಡಿದರೆ, ಪಕ್ಷದ ಯಾವುದೇ ಹುದ್ದೆಯನ್ನು ಅಲಂಕರಿಸಬಹುದು ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಪ್ರೇಮಾ ಹೆಗಡೆ ಕರೆ ನೀಡಿದರು. ಅವರು ಬಿಜೆಪಿ ವತಿಯಿಂದ ನಗರದ ಎಸ್.ಎಸ್. ಪುರಂನಲ್ಲಿರುವ ಗಾಯಿತ್ರಿ ಸಮುದಾಯ ಭವನದಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭಾರತೀಯ ಜನತಾ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರು ಶ್ರದ್ಧೆ ಮತ್ತು ನಿಷ್ಠೆಯಿಂದ ಪಕ್ಷದ ಕೆಲಸ ಮಾಡಿದರೆ ಪಕ್ಷದ ಯಾವುದೇ ಜವಾಬ್ದಾರಿಯನ್ನು ಅಲಂಕರಿಸಬಹುದು. ಇದಕ್ಕೆ ನನ್ನನ್ನು ಒಳಗೊಂಡಂತೆ ಅನೇಕ ಉದಾಹರಣೆಗಳಿವೆ ಎಂದು ಪಕ್ಷದ ಕಾರ್ಯಕರ್ತರಿಗೆ ತಿಳಿಸುತ್ತಾ ಮುಂದಿನ ದಿನಗಳಲ್ಲಿ ಹೆಚ್ಚಿನ ಕೆಲಸ ಮಾಡಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದದ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷರು ಹಾಗೂ ಬಿ.ಬಿ.ಎಂ.ಪಿ. ಸದಸ್ಯೆ ಗೀತಾ ವಿವೇಕಾನಂದ್ ಅವರು ಮುಂದಿನ ಚುನಾವಣೆಯಲ್ಲಿ ಕಾರ್ಯಕರ್ತರ ಪಾತ್ರವನ್ನು ಹಾಗೂ ಚುನಾವಣೆಯ ಪ್ರಾಮುಖ್ಯತೆಯನ್ನು ತಿಳಿಸಿಕೊಟ್ಟರು. ಪಕ್ಷದ ಮಹಿಳಾ ಕಾರ್ಯಕರ್ತರು ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಸಮಾಜವನ್ನು ಪರಿವರ್ತನೆ ಮಾಡುವ ಜವಾಬ್ದಾರಿ ಹೊರಬೇಕೆಂದು ಕರೆ ನೀಡಿದರು.
ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಭಾರತಿ ವೀರೇಶ್ ಅವರು ಮುಂದಿನ ಲೋಕಸಭಾ ಚುನಾವಣೆವರೆಗೂ ಪಕ್ಷ ನಡೆಸಬೇಕಾದ ಚಟುವಟಿಕೆಗಳು ಹಾಗೂ ಕಾರ್ಯ ಯೋಜನೆಗಳ ಬಗ್ಗೆ ತಿಳಿಸಿದರು.
ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಎಸ್. ಶಿವಪ್ರಸಾದ್ ಅವರು ಮಾತನಾಡಿದರು. ನಾಗರತ್ನ ದಯಾನಂದ್ ಪ್ರಾಸ್ತಾವಿಕ ನುಡಿಗಳನ್ನು ಮಾತನಾಡಿದರು. ಜಿಲ್ಲಾ ವರದಿಯನ್ನು ವಿಜಯ ಭಾಸ್ಕರ್ ತಿಳಿಸಿದರು. ರಾಜ್ಯ ಕಾರ್ಯದರ್ಶಿ ಎಂ.ಬಿ. ನಂದೀಶ್ ಸಮಾರೋಪ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿಗಳು, ಎಲ್ಲಾ ಮಂಡಲದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಮತ್ತು ಕಾರ್ಯಕರ್ತರು ಭಾಗವಹಿಸಿದರು.
ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನಿತಾ ನಂಜುಂಡಯ್ಯ ನಿರೂಪಿಸಿದರೆ, ಲತಾ ಕೃಷ್ಣ ಸ್ವಾಗತಿಸಿದರು. ಸೌಭಾಗ್ಯಮ್ಮ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

