ತುಮಕೂರು

ಪೋಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಲಿ: ಶಾಸಕ

Published On :

ಪಾವಗಡ: ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತರಿಗೆ ಆದ್ಯತೆ ಇದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಬೇಕೆಂದು ಶಾಸಕ ಕೆ.ಎಂ. ತಿಮ್ಮರಾಯಪ್ಪ ಪೋಷಕರಿಗೆ ಕರೆ ನೀಡಿದರು.
ತಾ. ಆದಿ ಜಾಂಬವ ನೌಕರರ ಒಕ್ಕೂಟದ ವತಿಯಿಂದ ಭಾನುವಾರ ಪಟ್ಟಣದ ಎಸ್ಎಸ್ಕೆ ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಸಮಾರಂಭದಲ್ಲಿ ಜನತೆಯ ಕೊರತೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಅವರು ಜನಾಂಗದ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ಸೇರಿದಂತೆ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮಧ್ಯೆ ಸಮನ್ವಯ ರೂಪಿಸಿಕೊಂಡು ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಸಲು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಉಪನ್ಯಾಸಕ ಲಿಂಗಣ್ಣ ಜಂಗಮರಹಳ್ಳಿ ಪ್ರಧಾನ ಭಾಷಣ ಮಾಡಿದರು. ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹುಚ್ಚಯ್ಯ, ಜಿಪಂ ಸದಸ್ಯ ಕೆಂಚಮಾರಯ್ಯ, ಮುಖಂಡರಾದ ಕೋರ್ಟ್ ನರಸಪ್ಪ, ವೆಟರ್ನರಿ ಉಗ್ರಪ್ಪ, ಮುಖ್ಯೋಪಾಧ್ಯಾಯ ಧನಂಜಯ ಮುಂತಾದವರು ಮಾತನಾಡಿದರು.
ಚಿತ್ರದುರ್ಗ ಮಾದಾರ ಗುರುಪೀಠದ ಮಾದಾರ ಚನ್ನಯ್ಯ ಸ್ವಾಮಿಜೀಗಳು ಸಾನಿಧ್ಯ ವಹಿಸಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಜಿನಿಯರ್ ಚಂದ್ರಕಾಂತ್ ವಹಿಸಿದ್ದರು.
ಮುಖಂಡ ಎಂ.ಕೆ.ನಾರಾಯಣಪ್ಪ, ಡಾ. ಚನ್ನಕೇಶವ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಆರ್. ಚೌಧರಿ, ಸನೌಸಂಘದ ಕಾರ್ಯದರ್ಶಿ ನರಸಿಂಹಮೂರ್ತಿ ವಳ್ಳೂರು ನಾಗೇಶ್ ಸೇರಿದಂತೆ ತಾಪಂ ಸದಸ್ಯರಾದ ರಾಮಾಂಜಿನಪ್ಪ ಮಂಜುನಾಥ್, ನರಸಮ್ಮ ಸರೋಜಮ್ಮ ಸೇರಿದಂತೆ ಅನೇಕ ಮುಖಂಡರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.