ತುಮಕೂರು

ಬಾಲ್ಯ ವಿವಾಹಕ್ಕೆ ಸಹಕಾರ ನೀಡಿದಲ್ಲಿ ಕಠಿಣ ಶಿಕ್ಷೆ

Published On :

ತಿಪಟೂರು: ಬಾಲ್ಯವಿವಾಹವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಹಂತಗಳಲ್ಲಿ ಬಾಲ್ಯ ವಿವಾಹ ನಿಷೇಧಾಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಿದ್ದು, ಗ್ರಾಮ ಮಟ್ಟದ ಬಾಲ್ಯ ವಿವಾಹ ನಿಷೇಧಾದಿಕಾರಿಗಳು
ತರಬೇತಿಯ ಪ್ರಯೋಜನ ಪಡೆದು ಬಾಲ್ಯ ವಿವಾಹವನ್ನು ತಡೆಗಟ್ಟಲು ಶ್ರಮಿಸಬೇಕೆಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ  ಕೆ.ಎಸ್. ಶಿಲ್ಪ ಕರೆ ನೀಡಿದರು.
ನಗರದ ಕಲ್ಪತರು ಕಾಲೇಜು ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಕಾನೂನು ಸೇವಾ ಸಮಿತಿಯ ಸಹಯೋಗದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಅನುಷ್ಠಾನ ಕುರಿತು ಗ್ರಾಮ ಪಂಚಾಯ್ತಿ ಮಟ್ಟದ ಬಾಲ್ಯ ವಿವಾಹ ನಿಷೇಧಾಧಿಕಾರಿಗಳಿಗೆ ಹೋಬಳಿ ಮಟ್ಟದ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಾಲ್ಯ ವಿವಾಹದಿಂದ ಮಕ್ಕಳ ಮೇಲೆ ದೈಹಿಕ, ಮಾನಸಿಕ ಮತ್ತು ಸಾಮಾಜಕಿ ದುಷ್ಪರಿಣಾಮ ಉಂಟಾಗಲಿದೆ. ಬಾಲ್ಯ ವಿವಾಹವನ್ನು ನೆರವೇರಿಸಲು ಸಹಕಾರ ನೀಡಿದವರಿಗೆ ಕಾನೂನಿಲ್ಲಿ 2 ವರ್ಷಗಳವರೆಗೆ ಕಠಿಣ ಜೈಲುವಾಸ ಅಥವಾ ಒಂದು ಲಕ್ಷ ರು.ಗಳವರೆಗೆ ದಂಡ ಅಥವಾ ಎರಡೂ ವಿಧಿಸಲಾಗುವುದರಿಂದ ಕಾನೂನನ್ನು ಅನುಸರಿಸಬೇಕೆಂದರು.
ಕಾರ್ಯಪ್ರವೃತ್ತರಾಗಿ: ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಬಿ.ಸಿಂಧು ಮಾತನಾಡಿ ಬಾಲ್ಯವಿವಾಹ ತಡೆಗಟ್ಟಲು ನಾವೆಲ್ಲರೂ ಕಾರ್ಯಪ್ರವೃತ್ತರಾಗಬೇಕು. ಮುಖ್ಯವಾಗಿ ಗ್ರಾಮ ಮಟ್ಟದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ದಿನದ ತರಬೇತಿಯ ಸದುಪಯೋಗ ಪಡಿಸಿಕೊಂಡು ಗ್ರಾಮ ಮಟ್ಟದಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಕ್ರಮವಹಿಸಲು ಕಾರ್ಯಗಾರದಲ್ಲಿ ಹಾಜರಾದ ಬಾಲ್ಯವಿವಾಹ ನಿಷೇದಾಧಿಕಾರಿಗಳಿಗೆ ತಿಳಿಸಿದರು.
ಆರಕ್ಷಕ ವೃತ್ತ ನಿರೀಕ್ಷಕ ಬಾಲಚಂದ್ರೇಗೌಡ ಮಾತನಾಡಿ 21ವರ್ಷ ಒಳಗಿನ ಹುಡುಗ ಹಾಗೂ 18ವರ್ಷದ ಒಳಗಿನ ಹುಡುಗಿಯರ ನಡುವೆ ಅಥವಾ ಇಬ್ಬರಲ್ಲೂ ಒಬ್ಬರೂ ನಿಗದಿತ ವಯಸ್ಸಿನೊಳಗಿದ್ದರೂ ಇಂತಹ ವಿವಾಹವನ್ನು ಬಾಲ್ಯ ವಿವಾಹವೆಂದು ಪರಿಗಣಿಸಲಾಗಿದ್ದು, ಕಾನೂನಿಲ್ಲಿ ಇದು ಶಿಕ್ಷಾರ್ಹ ಅಪರಾಧವಾಗುತ್ತದೆ. ಆದ್ದರಿಂದ ಇಂತಹ ಪ್ರಕರಣಗಳು ನಡೆಯದಂತೆ  ಮತ್ತು ಇದರ ದುಷ್ಪರಿಣಾಮಗಳ ಕುರಿತು ಜನರದಲ್ಲಿ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವೆಂದು ತಿಳಿಸಿದರು.
ತೊಡಕು: ತಾಲೂಕು ವೈದ್ಯಾಧಿಕಾರಿ ಡಾ. ಟಿ.ಆರ್. ಸ್ವಾಮಿ ಮಾತನಾಡಿ ಬಾಲ್ಯವಿವಾಹದಿಂದ ರಕ್ತಹೀನತೆ, ಅಪೌಷ್ಟಿಕತೆ, ಗರ್ಭಿಣಿಯರ, ಮಕ್ಕಳ ಸಾವು ಉಂಟಾಗುವುದಲ್ಲದೆ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ತೊಡಕುಂಟಾಗುತ್ತದೆ. ಈ ನಿಟ್ಟಿನಲ್ಲಿ ತರಬೇತಿಯ ಪ್ರಯೋಜನ ಪಡೆದು ಸಾಮಾಜಿಕ ಪಿಡುಗನ್ನು ನಿರ್ಮೂಲನೆ ಮಾಡಬೇಕೆಂದು ಕರೆ ನೀಡಿದರು.  ಸಿಡಿಪಿಓ ಪಿ. ಓಂಕಾರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿಯಾದ ವಾಸಂತ ಉಪ್ಪಾರ್, ಜಿಲ್ಲಾ ಮತ್ತಳ ಕಲ್ಯಾಣ ಸಮಿತಿಯ ಅಧ್ಯಕ್ಷ ನಂದಕುಮಾರ್, ಸಹಾಯಕ ಸರ್ಕಾರಿ ಅಭಿಯೋಜಕ ನಿರಂಜನಮೂರ್ತಿ ಸೇರಿದಂತೆ ತಾಲೂಕಿನ ಎಲ್ಲಾ 4 ಹೋಬಳಿಗಳ ಗ್ರಾಮ, ಗ್ರಾಮ ಪಂಚಾಯ್ತಿ ಮಟ್ಟದ ಬಾಲ್ಯವಿವಾಹ ನಿಷೇಧಾಧಿಕಾರಿಗಳಾದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮಲೆಕ್ಕಾಧಿಕಾರಿಗಳು, ಸಬ್ ಇನ್ಸ್ಪೆಕ್ಟರ್ಗಳು, ಹಿರಿಯ ಆರೋಗ್ಯ ನಿರೀಕ್ಷಕರು, ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ತರಬೇತಿಯಲ್ಲಿ ಹಾಜರಾಗಿ ತರಬೇತಿ ಪಡೆದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಸಿ. ಸುಂದರಮ್ಮ ನಿರೂಪಿಸಿ, ಮೇಲ್ವಿಚಾರಕಿ ಬಿ.ಎನ್.ಪ್ರೇಮಾ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.