ತುಮಕೂರು

ಹಳೆ ವಿದ್ಯಾರ್ಥಿಗಳ ಸಮಾವೇಶ

Published On :

ತುಮಕೂರು: ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯವು ಡಿ. 8 ರಂದು 13ನೇ ವರ್ಷದ ಹಳೆ ವಿದ್ಯಾರ್ಥಿಗಳ ಸಮಾವೇಶ ಅಯೋಜಿಸಿದೆ.
ಅಂದು ಬೆಳಗ್ಗೆ 9 ಗಂಟೆಗೆ ಪಿಜಿ ಸೆಮಿನಾರ್ ಹಾಲ್ನಲ್ಲಿ ನಡೆಯಲಿರುವ ಸಮಾವೇಶಕ್ಕೆ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಎಲ್ಲಾ ಹಳೆ ವಿದ್ಯಾರ್ಥಿಗಳು ತಮ್ಮ ಕುಟುಂಬ ಸಮೇತ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಂಸ್ಥೆಯ ಆಡಳಿತ ಮಂಡಳಿ, ಜಂಟಿ ಕಾರ್ಯದರ್ಶಿ ಡಾ.ಜಿ. ಪರಮೇಶ್ವರ ಮತ್ತು ಹಳೆ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷ ಡಾ.ಬಿ. ರಾಜೇಶ್ ಕಾಮತ್ ತಿಳಿಸಿದ್ದಾರೆ.
ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ತುಮಕೂರು: ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರೈಸ್ಥ, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಹೆಣ್ಣು ಮಕ್ಕಳು ವಿಚ್ಛೇದಿತ ಮಹಿಳೆ ಮತ್ತು ವಿಧವೆಯರಿಗೆ ವೈಯಕ್ತಿಕ ಹಾಗೂ ಸಾಮೂಹಿಕ ಮದುವೆ ಕಾರ್ಯಗಳಿಗೆ ವಿವಾಹ ಖರ್ಚು ವೆಚ್ಚಗಳು, ಜೀವನಾವಶ್ಯಕ ಸಾಮಗ್ರಿಗಳು ಅಥವಾ ನಗದು ಮತ್ತು ಸಾಮಗ್ರಿಗಳನ್ನು ನೀಡಲು 50 ಸಾವಿರ ರು.ಗಳ ಸಹಾಯಧನವನ್ನು ನೀಡುವ ಹೊಸ ಕಾರ್ಯಕ್ರಮವನ್ನು 2013-14ನೇ ಸಾಲಿನಿಂದ  ಅನುಷ್ಠಾನಗೊಳಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ತುಮಕೂರು ಜಿಲ್ಲಾ ವ್ಯಾಪ್ತಿಗೆ ಒಳಪಡುವ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳು, ಫಲಾನುಭವಿಗಳ ಕುಟುಂಬದ ವಾರ್ಷಿಕ ಆದಾಯ 1.50 ಲಕ್ಷಗಳಿಗಿಂತ ಕಡಿಮೆ ಇರುವಂತಹ ಇಚ್ಛೆಯುಳ್ಳವರು ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ತುಮಕೂರು ಇವರನ್ನು ಭೇಟಿ ಮಾಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.