ಕಣ್ಮುಚ್ಚಾಲೆ ಗುಂಪು ಉತ್ತಮ ಕೆಲಸ ಮಾಡುತ್ತಿದೆ: ಲಲಿತಾ
ತುಮಕೂರು: ನಗರದ ಕಣ್ಮುಚ್ಚಾಲೆ ಮಕ್ಕಳ ಗುಂಪು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಕವಿ ಬಳಗದ ಅಧ್ಯಕ್ಷೆ ಎಂ.ಸಿ. ಲಲಿತಾ ಅಭಿಪ್ರಾಯಪಟ್ಟರು.
ಅವರು ಕಣ್ಮುಚ್ಚಾಲೆ ಮಕ್ಕಳ ಗುಂಪು ಸಂಸ್ಥೆ 18 ನೇ ವರ್ಷದ ಜಿಲ್ಲಾ ಮಟ್ಟದ ಅಂಚೆ ಕಾರ್ಡಿನಲ್ಲಿ ಗಣಪ ಚಿತ್ರ ಬಿಡಿಸುವ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ನಾಡಿನ ಭಾಗದ ಮಕ್ಕಳೆಲ್ಲರೂ ಕಣ್ಮುಚ್ಚಾಲೆಯ ಚಟುವಟಿಕೆಯಲ್ಲಿ ಭಾಗವಹಿಸಿ ಸಂತಪಟ್ಟರೆ ನಮ್ಮ ಶ್ರಮ ಸಾರ್ಥಕವಾಗುತ್ತದೆ ಎಂದು ನುಡಿದರು.
ಗಣಪ ಕುರಿತ ಉಪನ್ಯಾಸ ನೀಡಿದ ಆಧ್ಯಾತ್ಮಿಕ ವಿದ್ವಾಂಸರಾದ ಶ್ರೀಲಕ್ಷ್ಮೀ ಪ್ರಸಾದ ಮಾತನಾಡಿ ಗಣಪನ ಚಿತ್ರವನ್ನು ಮಕ್ಕಳು ರಚಿಸುವ ಮೂಲಕ ತಮ್ಮ ಪ್ರತಿಭೆಯನ್ನು ಅತ್ಯುತ್ತಮವಾಗಿ ಪ್ರದರ್ಶಿಸುತ್ತಿದ್ದಾರೆ. ಗಣಪತಿಗೆ ನೂರಾರು ಹೆಸರುಗಳಿವೆ ಎಂದ ಅವರು ಮೂಷಿಕನನ್ನು ಗಣ ನಾಯಕನು ತನ್ನ ವಾಹನವನ್ನಾಗಿ ಮಾಡಿಕೊಂಡ ಕಥೆ, ಗರಿಕೆ ಕುರಿತ ಮಹತ್ವದ ಕಥೆಯನ್ನು ಹೇಳಿದರು. ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನಗಳನ್ನು ವಿತರಿಸಿದ ರೋಟರಿ ಮಾಜಿ ಅಧ್ಯಕ್ಷ ಕೆ.ಜಿ. ಬಸವಲಿಂಗಪ್ಪ ಕರ್ನಾಟಕ ರಾಜ್ಯಾದ್ಯಂತ ಕಲೆ, ಸಾಹಿತ್ಯ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಕ್ಕಳು ವಿನಿಮಯ ಮಾಡಿಕೊಳ್ಳಬೇಕು ಎಂದರು.
ಮಕ್ಕಳ ಸಾಹಿತಿ ಸಿದ್ದರಾಜು ಐವಾರ್ ಅವರು ಮಕ್ಕಳಲ್ಲಿ ಪ್ರತಿಭೆ ಗುರುತಿಸಿ ಕರೆ ತಂದು ಉತ್ತಮ ಕಾರ್ಯಕ್ರಮ ನಡೆಸಿ ಪ್ರೋತ್ಸಾಹಿಸುತ್ತಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಣ್ಮುಚ್ಚಾಲೆ ಮಕ್ಕಳ ಬಳಗದ ಅಧ್ಯಕ್ಷೆ ರೇಣುಕ ಪರಮೇಶ್ ಮಾತನಾಡಿ ನಮ್ಮ ಸಂಸ್ಥೆಯ ಕಾರ್ಯದರ್ಶಿ ಐವಾರ್ ಅತ್ಯುತ್ತಮವಾಗಿ ಹಾಗೂ ಒಂಟಿಯಾಗಿ ಪರಿಶ್ರಮದಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ ಎಂಬುದು ಸಮಾಧಾನದ ಸಂಗತಿ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

