ಕರವೇಯಿಂದ ವೈಭವದ ರಾಜ್ಯೋತ್ಸವ ಆಚರಣೆ
ಹುಳಿಯಾರು: ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕರವೇ ಮಹಿಳಾ ಘಟಕ, ಹೋಬಳಿಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ 58ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಪಟ್ಟಣದ ಕರವೇ ವೃತ್ತದಲ್ಲಿ ಕನ್ನಡ ಬಾವುಟವನ್ನು ಹಾರಿಸಿ, ಪ್ರಮುಖ ಬೀದಿಗಳಲ್ಲಿ ಸ್ತಬ್ಧ ಚಿತ್ರಗಳು, ನಾಸಿಕ್ ಡೋಲು, ಕೋಲಾಟದೊಂದಿಗೆ ಮೆರವಣಿಗೆ ನಡೆಸುವ ಮೂಲಕ ವೈಭವಯುತವಾಗಿ ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿದ ಮಾಜಿ ಶಾಸಕ ಕೆ.ಎಸ್. ಕಿರಣ್ ಕುಮಾರ್ ಮಾತನಾಡಿ, ಕನ್ನಡ ನಾಡನ್ನು ರಕ್ಷಿಸುವುದು ಕನ್ನಡಿಗರಾದ ನಮ್ಮೆಲ್ಲರ ಕರ್ತವ್ಯ, ಪ್ರಸ್ತುತದಲ್ಲಿ ಅನ್ಯಭಾಷೆಗಳ ಹಾವಳಿಯಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದರು. ಕನ್ನಡ ಭಾಷೆಯನ್ನು, ಕನ್ನಡನಾಡನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಕರವೇ ಸಂಘಟನೆ ಸಾಗುತ್ತಿರುವುದು ಶ್ಲಾಘನೀಯ ಎಂದರು.
ಪ್ರತಿದಿನ ಮನೆಮನೆಗಳಿಗೆ ಕನ್ನಡ ದಿನಪತ್ರಿಕೆಗಳನ್ನು ವಿತರಿಸುವ ಹುಡುಗರಿಗೆ ನೆನಪಿನಕಾಣಿಕೆ ನೀಡಿ ಗೌರವಿಸಿದರು. ಹಿರಿಯರಾದ ಸೀತಾರಾಮಯ್ಯ, ಗೋಪಾಲಸ್ವಾಮಿ, ನರಸಿಂಹಯ್ಯ ಅವರನ್ನು ಸನ್ಮಾನಿಸಲಾಯಿತು. ಕರವೇ ಹೋಬಳಿ ಘಟಕದ ಅಧ್ಯಕ್ಷ ಕೋಳಿ ಶ್ರೀನಿವಾಸ್,ಗ್ರಾ.ಪಂ. ಅಧ್ಯಕ್ಷೆ ಪುಟ್ಟಿಬಾಯಿ, ತಾ.ಪಂ.ಸದಸ್ಯೆ ಬೀಬೀಫಾತೀಮಾ, ದಲಿತ ಸಹಾಯವಾಣಿಯ ಹನುಮಂತಯ್ಯ, ಕರವೇ ಮಹಿಳಾ ಘಟಕದ ಅಧ್ಯಕ್ಷೆ ರತ್ನರಂಜಿನಿ, ಕರವೇ ಗೌರವಾಧ್ಯಕ್ಷ ಬೀರಪ್ಪ, ರಂಗಸ್ವಾಮಿ, ಸಂಘದ ಪದಾಧಿಕಾರಿಗಳಾದ ಚನ್ನಬಸವಯ್ಯ, ಗವಿರಂಗನಾಥ್, ಮುರುಳಿ, ಅಂಜನ್ಕುಮಾರ್, ಲಕ್ಷ್ಮೀಕಾಂತ, ದಿವಾಕರ್, ಹರೀಶ್, ಬೇಕರಿ ಪ್ರಕಾಶ್, ಕುಮಾರಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

