ತುಮಕೂರು

ನಾಳೆ ಆಟೋಚಾಲಕರಿಂದ ಕನ್ನಡ ರಾಜ್ಯೋತ್ಸವ

Published On :

ಚಿಕ್ಕನಾಯಕನಹಳ್ಳಿ: ಪಟ್ಟಣದ ಸುಭಾಷ್ ಚಂದ್ರಭೋಸ್ ಆಟೋಚಾಲಕರ ಮತ್ತು ಮಾಲೀಕರ ಸಂಘದಿಂದ
ಕನ್ನಡರಾಜ್ಯೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಸಂಘ ತಿಳಿಸಿದೆ. ಡಿ. 5ರಂದು ಆಚರಿಸಲಿರುವ ರಾಜ್ಯೋತ್ಸವದಂದು ಬೆಳಿಗ್ಗೆ 9.30ಕ್ಕೆ ಬಸ್ ನಿಲ್ದಾಣದಲ್ಲಿ ಧ್ವಜಾರೋಹಣವನ್ನು ತಾಲೂಕಿನ ಹಿರಿಯ ಸಾಹಿತಿಗಳಾದ ಎಂ.ವಿ. ನಾಗರಾಜರಾವ್ ನೆರವೇರಿಸಲಿದ್ದಾರೆ. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯುವ ಆಟೋಗಳ ಮೆರವಣಿಗೆಯಲ್ಲಿ ತಾಪಂ ಅಧ್ಯಕ್ಷರಾದ ಎಚ್.ಆರ್. ಶಶಿಧರ್ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 11.00 ಗಂಟೆಗೆ ಕನ್ನಡ ಸಂಘದ ವೇದಿಕೆಯಲ್ಲಿ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಸಿ.ಬಿ. ಸುರೇಶ್ಬಾಬು ವಹಿಸಲಿದ್ದು, ಉದ್ಘಾಟನೆಯನ್ನು ಜಿಲ್ಲಾ ಆಟೋಚಾಲಕರ ಸಂಘದ ಕಲ್ಯಾಣ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷರಾದ ವಿ.ಪ್ರತಾಪ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುರಸಭಾಧ್ಯಕ್ಷೆ ಗೀತಾ, ತಹಸೀಲ್ದಾರ್ ಕಾಮಾಕ್ಷಮ್ಮ, ಸಹಾಯಕ ಸಾರಿಗೆ ಅಧಿಕಾರಿಗಳಾದ ಪರ್ವತರಾಜ್ ಒಡೆಯರ್, ಆರಕ್ಷಕ ವೃತ್ತ ನಿರೀಕ್ಷಕರಾದ ಜಯರಾಮ್, ತಾಲೂಕು ಆಡಳಿತ ವೈದ್ಯಾಧಿಕಾರಿ ಕೆ.ಶಿವಕುಮಾರ್,ಪಿಎಸ್ಐ ಮುನಿ ರಾಜು, ಕಸಾಪ ಅಧ್ಯಕ್ಷರಾದ ಎಂ.ಎಸ್.ರವಿಕುಮಾರ್ ಮುಂತಾದವರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.