ತುಮಕೂರು

ಮಕ್ಕಳಲ್ಲಿರುವ ಪ್ರತಿಭೆಗೆ ಪೋತ್ಸಾಹ ನೀಡಿ

Published On :

ಕೊರಟಗೆರೆ: ಮಕ್ಕಳಲ್ಲಿರುವ ಪ್ರತಿಭೆಗೆ ಪೋತ್ಸಾಹ ನೀಡಿ ಅದನ್ನು ನೀರೆರೆದು ಪೋಷಿಸುವಂತಹ ಕಾರ್ಯ ಅಂಗನವಾಡಿ ಕೇಂದ್ರದಿಂದಲೆ ಪ್ರಾರಂಭವಾಗಿ ಅದಕ್ಕೆ ತಂದೆ ತಾಯಿಗಳು ಕೈ ಜೋಡಿಸಬೇಕು ಎಂದು ಜಿ.ಪಂ. ಸದಸ್ಯೆ ದಾಕ್ಷಾಯಿಣಿ ರಾಜಣ್ಣ ತಿಳಿಸಿದರು.
ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ತಾಲೂಕಿನ ಸೋಂಪುರ ಗ್ರಾಮದಲ್ಲಿ ಅಕ್ಕಿರಾಂಪುರ ವೃತ್ತ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಮಕ್ಕಳಿಂದ ಏರ್ಪಡಿಸಿದ್ದ ಬಾಲ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು,
ಮಗುವಿಗೆ ಮನೆಯೇ ಮೊದಲ ಪಾಠಶಾಲೆ. ತಾಯಿಯೇ ಮೊದಲ ಗುರು ಎಂಬ ಹಿರಿಯರ ನಾಣ್ನುಡಿಯಂತೆ ಈಗ ಅಂಗನವಾಡಿ ಕೇಂದ್ರವು ಮಗುವಿಗೆ ಮೊದಲ ಪಾಠಶಾಲೆಯಾಗಿದ್ದು ನಾವೆಲ್ಲರೂ ಸಹಕಾರ ನೀಡ ಬೇಕಾಗಿದೆ ಎಂದರು.
ಶಿಶು ಅಭಿವೃದ್ದಿ ಯೋಜನಾಧಿಕಾರಿ ವಿಶ್ವನಾಥ್ ಮಾತನಾಡಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತರುವುದರೊಂದಿಗೆ ಅವರಲ್ಲಿ ಬುದ್ದಿಶಕ್ತಿಯನ್ನು ಹೆಚ್ಚಿಸಿ ಆರೋಗ್ಯವಂತರನ್ನಾಗಿಸುವ ದೃಷ್ಠಿಯಿಂದ ಪೌಷ್ಟಿಕಾಂಶವುಳ್ಳ ಆಹಾರವನ್ನು ಒದಗಿಸುವ ಕಾರ್ಯಕ್ರಮ ನಡೆಯುತ್ತಿದ್ದು ಪೋಷಕರು ಅದರ ಸದುಪಯೋಗ ಪಡೆಯುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ತಾ.ಪಂ. ಉಪಾಧ್ಯಕ್ಷೆ ಸಂಗೀತ ಅಕ್ಕಿರಾಂಪುರ ವೃತ್ತ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಅಕ್ಕಿರಾಂಪುರ ಮತ್ತು ಹುಲಿಕುಂಟೆ ಗ್ರಾಮ ಪಂಚಾಯಿತಿ ಅನುದಾನದಲ್ಲಿ ನೀಡುವ ನೆಹರು ಮತ್ತು ಗಾಂಧೀಜಿ ಪೋಟೋಗಳನ್ನು ವಿತರಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಅಂಗನವಾಡಿ ಮೇಲ್ವಿಚಾರಕಿ ಮಮ್ತಾಜ್ ಬೀ ಇನ್ನಿತರರು ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.