ತುಮಕೂರು

ಲಕ್ಷದೀಪೋತ್ಸವ, ನೂತನ ಬೆಳ್ಳಿ ಪಲ್ಲಕ್ಕಿ ಸಮರ್ಪಣೆ

Published On :

ಗುಬ್ಬಿ: ಇತಿಹಾಸ ಪ್ರಸಿದ್ಧ ತಾಲೂಕಿನ ಸಿ.ಎಸ್.ಪುರ ಹೋಬಳಿ ಅಂಕಳಕೊಪ್ಪ ಮಜರೆ ವೀರಣ್ಣನಗುಡಿ ಶ್ರೀ ಭದ್ರಕಾಳಿ ಸಮೇತ ಶ್ರೀವೀರಭದ್ರಸ್ವಾಮಿ ದೇವಾಲಯದಲ್ಲಿ ಲಕ್ಷದೀಪೋತ್ಸವ ಹಾಗೂ ನೂತನ ಬೆಳ್ಳಿ ಪಲ್ಲಕ್ಕಿ ಸಮರ್ಪಣೆ ಸಮಾರಂಭದಲ್ಲಿ ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ  ನಿರ್ಮಲಾನಂದನಾಥ ಸ್ವಾಮೀಜಿ, ಮಾಯಸಂದ್ರ ಕಲ್ಪತರು ಆಶ್ರಮದ ಶ್ರೀಶಿವಕುಮಾರ ನಾಥಸ್ವಾಮೀಜಿ, ಶ್ರೀಕ್ಷೇತ್ರ ಸಿದ್ದರಬೆಟ್ಟದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರು.
ಲಕ್ಷದೀಪೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ವಿ.ಪುಟ್ಟಸ್ವಾಮಿ, ಕಾಯಾಧ್ಯಕ್ಷ ಎಂ.ವಿ.ಬಸವರಾಜು, ಕಾರ್ಯದರ್ಶಿ ಶಿವರುದ್ರಯ್ಯ ಸೇರಿದಂತೆ ರಾಜಕೀಯ ಮುಖಂಡರು, ಗ್ರಾಮಸ್ಥರು ಹಾಗೂ ನಾಡಿನ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು.
ಕಾರ್ತೀಕ ಮಾಸದ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು. ಸುಮಾರು 15 ಲಕ್ಷ ರು. ವೆಚ್ಚದಲ್ಲಿ ಅತ್ಯಾಕರ್ಷಕವಾಗಿ ನಿರ್ಮಿಸಿರುವ ಬೆಳ್ಳಿಪಲ್ಲಕ್ಕಿಯನ್ನು ಸಮರ್ಪಿಸಲಾಯಿತು. ಲಕ್ಷದೀಪೋತ್ಸವದ ಅಂಗವಾಗಿ ಶ್ರೀಭದ್ರಕಾಳಿ ಸಮೇತ ವೀರಭದ್ರಸ್ವಾಮಿಗೆ ವಿಶೇಷ ಹೂವಿನ ಅಲಂಕಾರ, ಅಕ್ಕಿಪೂಜೆ ಸೇರಿದಂತೆ ವಿವಿಧ ಅಲಂಕಾರಗಳನ್ನು ಮಾಡಲಾಗಿತ್ತು. ನೂತನವಾಗಿ ನಿರ್ಮಿಸಲಾಗಿದ್ದ ಬೆಳ್ಳಿಪಲ್ಲಕ್ಕಿಯಲ್ಲಿ ಶ್ರೀ ಭದ್ರಕಾಳಿ ಸಮೇತ ಶ್ರೀವೀರಭದ್ರಸ್ವಾಮಿಯವರ ವೈಭವಯುತ ಅಲಂಕಾರ ನಡೆಸಲಾಯಿತು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಡೊಳ್ಳುಕುಣಿತ, ಬೊಂಬೆಕುಣಿತ, ವೀರಗಾಸೆ ಕುಣಿತ, ನಂದೀಧ್ವಜ ಕುಣಿತ ಸೇರಿದಂತೆ ಮನರಂಜನಾ ಕಾರ್ಯಕ್ರಮಗಳನ್ನು ನಡೆಸಲಾಯಿತು.
ಲಕ್ಷದೀಪೋತ್ಸವದಲ್ಲಿ ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತಾದಿಗಳಿಗೆ ವಿಶೇಷ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.