ನಾನೂ ಟಿಕೆಟ್ ಆಕಾಂಕ್ಷಿ: ರಾಜೇಂದ್ರ
ತುಮಕೂರು: ಮುಂಬರುವ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಿಂದ ತಾವು ಕೂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದು ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ತಿಳಿಸಿದ್ದಾರೆ. ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಯುವಕರಿಗೆ ಆದ್ಯತೆ ನೀಡುವ ಇರಾದೆ ಕಾಂಗ್ರೆಸ್ಗೆ ಇದೆ. ಹೀಗಾಗಿ ತಾವು ಕೂಡ ತುಮಕೂರಿನಿಂದ ಲೋಕಸಭಾ ಚುನಾವಣೆಗೆ ಪ್ರಬಲ ಟಿಕೆಟ್ ಆಕಾಂಕ್ಷಿ ಎಂದರು. ಈಗಾಗಲೇ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಅನ್ನು ಸದೃಢವಾಗಿ ಕಟ್ಟಲಾಗಿದೆ. ವರಿಷ್ಠರು ಕೂಡ ತಮ್ಮ ಕೆಲಸವನ್ನು ಗಮನಿಸಿದ್ದಾರೆ. ಅಲ್ಲದೇ ಯುವಕರಿಗೆ ಆದ್ಯತೆ ನೀಡುವ ಇರಾದೆ ಹೈಕಮಾಂಡ್ಗೆ ಇರುವುದರಿಂದ ತಾವು ಕೂಡ ಪ್ರಬಲ ಟಿಕೆಟ್ ಆಕಾಂಕ್ಷಿ ಎಂದರು. ಈಗಾಗಲೇ ಬೂತ್ ಮಟ್ಟದಲ್ಲಿ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ ಎಂದ ಅವರು ಜಿಲ್ಲಾ ಯೂತ್ ಕಾಂಗ್ರೆಸ್ಗೆ ಜನವರಿ ತಿಂಗಳಿನಲ್ಲಿ ಚುನಾವಣೆ ಇದ್ದು ಮತ್ತೊಮ್ಮೆ ಸ್ಪರ್ಧಿಸುವುದಾಗಿ ತಿಳಿಸಿದರು. ಈಗಾಗಲೇ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಚುನಾವಣೆಗೆ ಸ್ಪರ್ಧಿಸಲು ತಮಗೆ ಹಸಿರು ನಿಶಾನೆ ತೋರಿಸಿದ್ದಾರೆ ಎಂದರು.
ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ
ತುಮಕೂರು: ಪಾವಗಡ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಕ್ಕೆ ಸಹಾಯಕಿಯರನ್ನು ಗುರುತಿಸುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಮೇಡಿ ಗ್ರಾ.ಪಂ.ನ ಕನ್ನಮೇಡಿ-2 (ಸಾಮಾನ್ಯ), ಬ್ಯಾಡನೂರು ಗ್ರಾ.ಪಂ.ನ ಬಿ.ದೊಡ್ಡಹಟ್ಟಿ (ಸಾಮಾನ್ಯ), ನ್ಯಾಯದಗುಂಟೆ ಗ್ರಾ.ಪಂ.ನ ಕದಿರೆಹಳ್ಳಿ ಕಾಲೋನಿ ಪ.ಜಾತಿ (ಎಸ್.ಸಿ.) ಸಹಾಯಕಿ ಹುದ್ದೆ ಖಾಲಿ ಇದ್ದು, ಅರ್ಜಿಗಳನ್ನು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ಶ್ರೀನಿವಾಸನಗರ, ಕನ್ನಿಕಾಪರಮೇಶ್ವರಿ ದೇವಸ್ಥಾನದ ಹತ್ತಿರ, ಪಾವಗಡ ಇವರಿಗೆ ಡಿಸೆಂಬರ್ 20, 2013 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಪಾವಗಡ ಇವರನ್ನು ಸಂಪರ್ಕಿಸಬಹುದಾಗಿದೆ.
ಚಂದ್ರಶೇಖರ್ಗೆ ಬೀಳ್ಕೊಡುಗೆ
ತಿಪಟೂರು: ನಗರದ ಉದಯ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು 32 ವರ್ಷಗಳ ಕಾಲ ದೈಹಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಚಂದ್ರಶೇಖರ್ ಅವರನ್ನು ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕ ವರ್ಗ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಸನ್ಮಾನಿಸಿ ಬೀಲ್ಕೊಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

