ತುಮಕೂರು

ಮತದಾರರ ಪಟ್ಟಿಯಿಂದ ಬಿಟ್ಟ ಹೆಸರು ಸೇರಿಸಲು ಸೂಕ್ತ ಕ್ರಮ

Published On :

ತುಮಕೂರು: ಮತದಾರರ ಪಟ್ಟಿಯಿಂದ ಬಿಟ್ಟು ಹೋಗಿರುವ ಹೆಸರುಗಳನ್ನು ಸೇರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು
ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಷಫಿ ಅಹಮದ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಘಟಕಗಳ ಮುಖಂಡರು, ಮಾಜಿ ಶಾಸಕರು ಭಾಗವಹಿಸಿದ್ದು ಈ ತೀರ್ಮಾನ ಕೈಗೊಳ್ಳಲಾಯಿತು. ಹೆಚ್ಚುವರಿ ಬೂತ್‌ಗಳನ್ನು ತೆರೆಯಲು ಸಂಬಂಧ ಪಟ್ಟ ಚುನಾವಣಾ ಅಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿ ಅಧಿಕಾರಿಗಳಿಂದ ಮಾರ್ಗದರ್ಶನ ಪಡೆದು ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ತಿಳಿಸಿದರು.
ಡಿ.10 ರಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರೆದಿರುವ ಸಭೆಗೆ ಕಡ್ಡಾಯವಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು ಹಾಜರಾಗಬೇಕು. ಅಲ್ಲದೇ 15 ರಂದು ಮುಖ್ಯಮಂತ್ರಿಗಳು ವಿವಿಧ ಕಾರ್ಯಕ್ರಮಗಳಿಗೆ ತುಮಕೂರಿಗೆ ಆಗಮಿಸಿದ್ದು ಜಿಲ್ಲೆಯ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.