ತುಮಕೂರು

ಮೀನುಗಾರರ, ಮೀನು ಕೃಷಿಕರ ಅಧ್ಯಕ್ಷರಾಗಿ ಕೃಷ್ಣಮೂರ್ತಿ ನೇಮಕ

Published On :

ತುರುವೇಕೆರೆ: ಕರ್ನಾಟಕ ರಾಜ್ಯ ಮೀನುಗಾರರ ಮತ್ತು ಮೀನು ಕೃಷಿಕರ ಕ್ಷೇಮಾಭ್ಯುದಯ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾಗಿ ತಾಲೂಕಿನ ಬುಗುಡನಹಳ್ಳಿ ಕೃಷ್ಣಮೂರ್ತಿಯವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಒಕ್ಕೂಟದ ಅಧ್ಯಕ್ಷ ತಿಪಟೂರು ಕೃಷ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂಘಟನೆಯ ಗುರಿ ಶೋಷಿತ ಜನರ ಸಮಾಜ ಸೇವೆಯಾಗಿದೆ. ರಾಜ್ಯದಲ್ಲಿ ಹತ್ತಾರು ವರ್ಷಗಳಿಂದ ಮೀನುಗಾರರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರು ಅನುಭವಿಸುತ್ತಿರುವ ನೋವು, ಸಂಕಟಗಳ ಹಾಗೂ ನಾನಾ ಸಮಸ್ಯೆಗಳಿಗೆ ದನಿಯಾಗಿ ಹೋರಾಟ ಮಾಡುವುದು ಒಕ್ಕೂಟದ ಆಶಯವಾಗಿದೆ. ಮೀನುಗಾರರಿಗೆ ಸರ್ಕಾರದಿಂದ ಸಿಗಬೇಕಾದ ಸವಲತ್ತುಗಳು ನೇರವಾಗಿ ಫಲಾನುಭವಿಗಳಿಗೇ ದೊರಕಿಸಲು ಒಕ್ಕೂಟ ಸಕ್ರಿಯವಾಗಿದೆ. ಇಂತಹ ಸಂಘಟನೆಗೆ ಆಸಕ್ತ ಯುವಕರ ಅಗತ್ಯವಿರುವುದರಿಂದ ತಾಲ್ಲೂಕಿನ ಬುಗುಡನಹಳ್ಳಿ ಕೃಷ್ಣಮೂರ್ತಿಯವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಾಗಿ ತಿಪಟೂರು ಕೃಷ್ಣ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.