'ಕೃಷಿ ಉತ್ಸವದಿಂದ ವಿವಿಧ ಪ್ರಯೋಜನ'
ತುಮಕೂರು: ರೈತನೇ ದೇಶದ ಬೆನ್ನೆಲುಬು ರೈತರಿಗೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರದ ಜೊತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿರುವುದು ಶ್ಲಾಘನೀಯ. ಕೃಷಿ ಉತ್ಸವದಿಂದ ರೈತರ ಜ್ಞಾನವೃದ್ಧಿಸುತ್ತದೆ ಎಂದು ನಗರಸಭೆ ಅಧ್ಯಕ್ಷೆ ಗೀತಾ ರುದ್ರೇಶ್ ತಿಳಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕು ಮಟ್ಟದ ಕೃಷಿ ಉತ್ಸವ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೃಷಿಕರ ಸ್ವಾವಲಂಬಿ ಬದುಕಿಗಾಗಿ ತರಬೇತಿ, ಕೃಷಿ ವಿಚಾರ ಸಂಕಿರಣ, ಕೃಷಿ ಅಧ್ಯಯನ ಪ್ರವಾಸ ಅನುದಾನ ಕಾರ್ಯಕ್ರಮವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿರುವುದರ ಜೊತೆಗೆ ಕೃಷಿ ಉತ್ಸವದಂತಹ ಕಾರ್ಯಕ್ರಮ ನಡೆಸಲಾಗುವುದು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಪಿ.ಗಂಗಾಧರ ರೈ ನುಡಿದರು. ನಗರಸಭಾ ಸದಸ್ಯರಾದ ವೆಂಕಟಪ್ಪ, ಇಂದ್ರಕುಮಾರ್, ಪ್ರೆಸ್ ರಾಜಣ್ಣ, ಮಹೇಶ್, ಗಣ್ಯರಾದ ಮಾಜಿ ನಗರಸಭಾ ಸದಸ್ಯ ಲಕ್ಷ್ಮೀ ನರಸಿಂಹರಾಜು, ಬೆಳ್ಳಿ ಲೋಕೇಶ್, ಯೋಜನಾಧಿಕಾರಿ ಸಂತೋಷ್ಕುಮಾರ್, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಡಾ.ಸಂಜಯ್ ನಾಯಕ್, ವಿಜಯ ಭಾಸ್ಕರ್, ಧನಂಜಯ್ ಇಲಾಖೆಯ ವಿವಿಧ ಅಧಿಕಾರಿ ವರ್ಗ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

