ತುಮಕೂರು

ರಾಷ್ಟ್ರಮಟ್ಟದಲ್ಲಿ ದ್ವಿತೀಯ ಸ್ಥಾನ

Published On :

ತಿಪಟೂರು: ಬೆಂಗಳೂರಿನಲ್ಲಿ ನಡೆದ 2013-14ನೇ ಸಾಲಿನ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ತಿಪಟೂರಿನ ಗುರುಕುಲ ವಿದ್ಯಾಸಂಸ್ಥೆಯ 8ನೇ ತರಗತಿ ವಿದ್ಯಾರ್ಥಿನಿ ಎಸ್.ಶ್ರೇಯಸಿ ದ್ವಿತೀಯ ಸ್ಥಾನ ಪಡೆದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಅವರಿಂದ ಬಹುಮಾನ ಸ್ವೀಕರಿಸಿದರು. ವಿದ್ಯಾರ್ಥಿನಿ ಸಾಧನೆಗೆ ಪೋಷಕರು ಹಾಗೂ ಶಾಲಾ ಶಿಕ್ಷಕ ವೃಂದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು, ಜಿಲ್ಲೆಗೆ ಕೀರ್ತಿ ತಂದಿರುವ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರತಿಯೊಂದು ಮಕ್ಕಳ ಬಗ್ಗೆ ಕಾಳಜಿ ವಹಿಸಿ
ತುಮಕೂರು: ಅನಾಥ, ನಿರ್ಲಕ್ಷಿತ ಮಕ್ಕಳು ಸೇರಿದಂತೆ ಪ್ರತಿಯೊಂದು ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಅಭಿಪ್ರಾಯಪಟ್ಟರು.
ಅವರು ತುಮಕೂರು ತಾಲೂಕಿನ ಬೆಳಧರ ಗ್ರಾಮ ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಸಮಗ್ರ ಮಕ್ಕಳ ರಕ್ಷಣಾ ಯೋಜನೆ ಮತ್ತು ಬಾಲನ್ಯಾಯ ಕಾಯ್ದೆ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಅಭಿವೃದ್ಧಿ ಪಥದ ಜೊತೆಗೆ ಮಕ್ಕಳ ಸಂಕಷ್ಟಗಳ ಸರಮಾಲೆಯೂ ಬೆಳೆಯುತ್ತಿದ್ದು, ಕೇವಲ ನಮ್ಮ ಮಕ್ಕಳಲ್ಲದೆ ಅವರ ಜೊತೆಗೆ ಇರುವ ಇತರೆ ಮಕ್ಕಳ ಬಗ್ಗೆಯೂ ಕಾಳಜಿ ವಹಿಸಬೇಕು ಎಂದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೂಲಕ ಅನುಷ್ಠಾನಗೊಳಿಸಲಾಗುತ್ತಿರುವ ವಿಶೇಷ ಪಾಲನಾ ಯೋಜನೆ, ಪ್ರಾಯೋಜಿತ ಕಾರ್ಯಕ್ರಮಗಳಲ್ಲದೇ, ಮಕ್ಕಳ ಸಹಾಯವಾಣಿ, ದತ್ತು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಈರಣ್ಣ ಮಾತನಾಡಿ, ವಿವಿಧ ರೀತಿಯ ಸಂಕಷ್ಟಕ್ಕೊಳಗಾಗಿರುವ ಮಕ್ಕಳ ಮನಸ್ಥಿತಿ ತುಂಬ ಸೂಕ್ಷ್ಮವಾಗಿದ್ದು, ಅವರಿಗೆ ಶಿಕ್ಷಣದ ಜೊತೆಗೆ ಮಾನಸಿಕ ಸ್ಥೈರ್ಯ ತುಂಬುವ ಕಾರ್ಯವೂ ಆಗಬೇಕೆಂದು ತಿಳಿಸಿದರು.ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶಯ್ಯ ಮಾತನಾಡಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ವಿಷಯಗಳನ್ನು ಗ್ರಾಮಮಟ್ಟದಲ್ಲಿ ಎಲ್ಲರ ಗಮನಕ್ಕೂ ತರುವುದು ಅತ್ಯವಶ್ಯಕವಾಗಿದ್ದು, ಮಕ್ಕಳಿಗೆ ಕೇವಲ ವಿದ್ಯಾಭ್ಯಾಸ ಮಾತ್ರವಲ್ಲದೇ ಬದುಕುವ ಕಲೆಯನ್ನು, ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಆದರ್ಶಗಳನ್ನು ಅಂಗನವಾಡಿ ಮತ್ತು ಶಾಲಾಮಟ್ಟದಲ್ಲಿ ಕಲಿಸಿಕೊಡಬೇಕೆಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.