ತುಮಕೂರು

ಬಾಲ್ಯ ವಿವಾಹ ಅನಿಷ್ಠ ಪದ್ಧತಿ: ಅನಿಲ್ ಕುಮಾರ್

Published On :

ಗುಬ್ಬಿ: ಬಾಲ್ಯ ವಿವಾಹವು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಅನಿಷ್ಠ ಪದ್ಧತಿಯಾಗಿದ್ದು ಈ ಸಾಮಾಜಿಕ ಅನಿಷ್ಟ ಪದ್ಧತಿಯನ್ನು ಶಾಶ್ವತವಾಗಿ ತೊಡೆದುಹಾಕಲು ಅಧಿಕಾರಿಗಳು ಮತ್ತು ಜನಸಾಮಾನ್ಯರು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ತಹಸಿಲ್ದಾರ್ ಆರ್.ಅನಿಲ್ ಕುಮಾರ್ ಕರೆ ನೀಡಿದರು.
ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆವತಿಯಿಂದ ಏರ್ಪಡಿಸಿದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ರ ಅನುಷ್ಠಾನಗೊಳಿಸುವ ಬಗ್ಗೆ ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಾಲ್ಯ ವಿವಾಹದಂತಹ ಹಲವು ಪದ್ಧತಿಗಳು ಇಡೀ ಸಾಮಾಜಿಕ ವ್ಯವಸ್ಥೆಗೆ ಮಾರಕವಾಗವೆ. ಸಾಮಾಜಿಕ ವ್ಯವಸ್ಥೆಗೆ ವಿರುದ್ಧವಾದ ಅನಿಷ್ಠ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದುಹಾಕುವತ್ತ ಪ್ರತಿಯೊಬ್ಬರೂ ಗಂಭೀರ ಚಿಂತನೆ ನಡೆಸಬೇಕೆಂದರು.
ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಬಿ.ಮಂಜುನಾಥ್ ಮಾತನಾಡಿ ಮಕ್ಕಳ ಹಕ್ಕುಗಳ ಬಗ್ಗೆ ಮಕ್ಕಳಿಗೆ ತಿಳಿಹೇಳುವ ಮೂಲಕ ಸಾಮಾಜಿಕ ಅನಿಷ್ಠ ಪದ್ಧತಿಯಾದ ಬಾಲ್ಯವಿವಾಹವನ್ನು ತಡೆಗಟ್ಟಲು ಶಿಕ್ಷಕ ಸಮುದಾಯ ಚಿಂತನೆ ನಡೆಸಬೇಕೆಂದ ಅವರು ಗ್ರಾಮೀಣ ಪ್ರದೇಶಗಳಲ್ಲಿ ಪೋಷಕರು ಮಕ್ಕಳಿಗೆ ಬಾಲ್ಯಾವಸ್ಥೆಯಲ್ಲಿ ವಿವಾಹ ಮಾಡದಂತೆ ಸೂಕ್ತ ತಿಳುವಳಿಕೆ ನೀಡುವುದರ ಜೊತೆಗೆ ಬಾಲ್ಯವಿವಾಹದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಢಿಸುವತ್ತ ಮಹತ್ವದ ಕಾರ್ಯ ಮಾಡಬೇಕೆಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ.ಬಸವರಾಜು, ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಹೊನ್ನೇಶಪ್ಪ ಮಾತನಾಡಿದರು.
ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ಮಕ್ಕಳ ಸಮಿತಿ ಸದಸ್ಯ ವೀರಣ್ಣ, ಅಧಿಕಾರಿ ಕವಿತಾ ಸೇರಿದಂತೆ ತಾಲೂಕಿನ ವಿವಿಧ ಪ್ರೌಢಶಾಲಾ ಮುಖ್ಯಶಿಕ್ಷಕರು ಭಾಗವಹಿಸಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.