ತುಳಿತಕ್ಕೊಳಗಾದವರೆಲ್ಲರೂ ದಲಿತ ವರ್ಗಕ್ಕೆ ಸೇರಿದವರು: ಪುಟ್ಟನರಸಯ್ಯ
ಕುಣಿಗಲ್: ಸಮಾಜದಲ್ಲಿ ತುಳಿತಕ್ಕೊಳಗಾದವರೆಲ್ಲರೂ ದಲಿತ ವರ್ಗಕ್ಕೆ ಸೇರಿದವರಾಗಿದ್ದಾರೆ ಎಂದು ತಹಸೀಲ್ದಾರ್ ಪುಟ್ಟನರಸಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಕಂದಾಯ ಭವನದಲ್ಲಿ ಪ.ಜಾತಿ ಮತ್ತು ಪ.ಪಂಗಡ ರಾಜ್ಯ ಸರ್ಕಾರಿ ನೌಕರರ ಸಮನ್ವಯ ಅಮಿತಿ ಆಶ್ರಯದಲ್ಲಿ ನಡೆದ ಡಾ.ಬಿ.ಆರ್. ಆಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ದಲಿತ ವರ್ಗದ ನಾಯಕರೆಂದೇ ಬಿಂಬಿಸುತ್ತಿರುವುದು ದೇಶದ ದುರಂತ. ಅಧಿಕಾರದಲ್ಲಿರುವವರು ಜನಾಂಗದ, ಸಮಾಜದ ಅಭಿವೃದ್ಧಿಗೆ ಪ್ರಾಮಾಣಿಕ ಬದ್ಧತೆಯಿಂದ ಕಾರ್ಯನಿರ್ವಹಸಿಬೇಕೆಂದರು.
ಪುರಸಭೆ ಮುಖ್ಯಾಧಿಕಾರಿಗಳಾದ ಅನ್ನದಾನಿ ಮಾತನಾಡಿ, ದಲಿತರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಸ್ವಾವಲಂಬಿಗಳಾಗದ ಹೊರತು ಸಮಗ್ರ ಏಳಿಗೆ ಸಾಧ್ಯವಿಲ್ಲ, ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ತಳಹದಿಯ ಮೇಲೆ ಸರ್ಕಾರ ನಡೆಯುತ್ತಿದ್ದರೂ, ಈ ಜನಾಂಗದವರು ರಾಜ್ಯದ ಮುಖ್ಯಮಂತ್ರಿಯಾಗಲಿ, ರಾಷ್ಟ್ರದ ಪ್ರಧಾನ ಮಂತ್ರಿಯಾಗಲು ಸಾಧ್ಯವಾಗಿಲ್ಲ. ಜನಾಂಗದ ಬಾಂಧವರು ಆಂತರಿಕ ಕಚ್ಚಾಟ ಕೀಳರಿಮೆ ಬಿಟ್ಟು ಒಮ್ಮತದಿಂದ ಮುನ್ನಡೆದಾಗ ಎಲ್ಲಾ ರೀತಿಯ ಅಧಿಕಾರ ಪಡೆಯಬಹುದೆಂದರು.
ಜಿ.ಪಂ.ಸದಸ್ಯ ವೈ.ಎಚ್.ಹುಚ್ಚಯ್ಯ, , ಮುಖಂಡರಾದ ವರದರಾಜು, ಎಸ್.ಆರ್. ಚಿಕ್ಕಣ್ಣ, ಸಂಘದ ಅಧ್ಯಕ್ಷ ಎಸ್.ಆರ್. ತಿಮ್ಮಯ್ಯ, ಕಾರ್ಯದರ್ಶಿ ನಾರಾಯಣ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

