'ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು'
ತಿಪಟೂರು: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸಮಾಜದ ಬಗ್ಗೆ ಕಾಳಜಿ ಇಟ್ಟುಕೊಂಡು ನಾಯಕತ್ವದ ಗುಣ ಮತ್ತು ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕೆಂದು ಮಾಜಿ ಶಾಸಕ ಬಿ.ಸಿ. ನಾಗೇಶ್ ಕರೆ ನೀಡಿದರು.
ತಾಲ್ಲೂಕಿನ ಹುಲ್ಲುಕಟ್ಟೆ ಗ್ರಾಮದಲ್ಲಿ ಕಲ್ಪತರು ಪದವಿ ಪೂರ್ವ ಕಾಲೇಜಿನ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಎನ್.ಎಸ್.ಎಸ್ ಶಿಬಿರಗಳಿಂದ ಗ್ರಾಮೀಣರಲ್ಲಿ ಜಾಗೃತಿ ಮೂಡಿಸಬೇಕು. ನಾವೆಲ್ಲರೂ ಸ್ವಾವಲಂಬಿಗಳಾಗಿ ಬದುಕಿ, ಪರಾವಲಂಬನೆಯ ಜೀವನವನ್ನು ಕೈಬಿಟ್ಟಾಗ ಮಾತ್ರ ನಮ್ಮ ದೇಶದ ಸಮಸ್ಯೆಗಳಾದ ಬಡತನ, ನಿರುದ್ಯೋಗ, ಆಹಾರದ ಸಮಸ್ಯೆಗಳನ್ನು ನಿವಾರಿಸಬಹುದು ಎಂದರು. ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಟಿ.ಯು.ಜಗದೀಶ್ಮೂರ್ತಿ ವಹಿಸಿದ್ದರು.
ಸಮಾರಂಭದಲ್ಲಿ ಪ್ರಭಾರ ಪ್ರಾಂಶುಪಾಲ ಮೃತ್ಯುಂಜಯ,ಗ್ರಾಮಸ್ಥರಾದ ಬಿ.ರಾಜಶೇಖರಯ್ಯ,ಪ್ರಾಂಶುಪಾಲ ಗುಂಡಪ್ಪ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಉಪನ್ಯಾಸಕರಾದ ರಂಗನಾಥ್ ಸ್ವಾಗತಿಸಿ, ಮಹದೇವಯ್ಯ ನಿರೂಪಿಸಿ, ಶಿಬಿರಾಧಿಕಾರಿ ರಾಜಶೇಖರ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

