ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲಾಪ್ರವೇಶಕ್ಕೆ ಅರ್ಜಿ ಆಹ್ವಾನ
ಚಿಕ್ಕನಾಯಕನಹಳ್ಳಿ: 2014-15ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗಳಲ್ಲಿ ಪ್ರವೇಶಾತಿ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಸಾ.ಚಿ.ನಾಗೇಶ್ ತಿಳಿಸಿದ್ದಾರೆ.
ಈ ಸಂಬಂಧ ಹೇಳಿಕೆ ನೀಡಿರುವ ಅವರು ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ 2014-15ನೇ ಸಾಲಿನಲ್ಲಿ ಪ್ರವೇಶ ಪಡೆಯಲು ಮಕ್ಕಳ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಪೋಷಕರು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ವಾರ್ಷಿಕ 3,50,000 ರು.ಗಳಿಗಿಂತ ಕಡಿಮೆ ಆದಾಯವಿರುವ ಆರ್ಥಿಕವಾಗಿ ಹಿಂದುಳಿದವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮೀಸಲಾದ ಶೇ.25 ರಷ್ಟು ಉಚಿತ ಪ್ರವೇಶ ಪಡೆಯಲು ಜನವರಿ 7ರಿಂದ ಫೆಬ್ರವರಿ 8ರವರಗೆ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಫೆಬ್ರವರಿ 17ರಂದು ಅರ್ಜಿ ಪರಿಶೀಲಿಸಿ 28ರಂದು ಅರ್ಹ ವಿದ್ಯಾರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಮಾರ್ಚ್ 3ರಿಂದ ಆಯ್ಕೆಯಾದ ಮಕ್ಕಳ ದಾಖಲಾತಿ ಪ್ರಾರಂಭಿಸಲಾಗುವುದು. ಪೋಷಕರು ಅರ್ಜಿಯನ್ನು ತಮ್ಮ ಸಮೀಪದ ಶಾಲೆಗಳಲ್ಲಿ ಪಡೆಯಬಹುದಾಗಿರುತ್ತದೆ.
ಹೆಚ್ಚಿನ ವಿವರಗಳಿಗೆ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

