ತುಮಕೂರು

ವಿದ್ಯಾರ್ಥಿಗಳಿಗೆ ಶಿಸ್ತು, ಸಂಯಮ ಅವಶ್ಯ: ಕೆ.ಆರ್.ಶಂಕರಪ್ಪ

Published On :

ತಿಪಟೂರು: ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿಯೇ ಶಿಸ್ತು, ಸಂಯಮವನ್ನು ಅಳವಡಿಸಿಕೊಂಡಲ್ಲಿ ಮುಂದೆ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದು ಪ್ರಾಚಾರ್ಯ ಕೆ.ಆರ್.ಶಂಕರಪ್ಪ ತಿಳಿಸಿದರು.
ತಾಲೂಕಿನ ರಂಗಾಪುರದ ಎಸ್.ಪಿ.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಆರ್.ಆರ್.ಸಿ. ರೆಡ್ ರಿಬ್ಬನ್ ಕ್ಲಬ್ ವತಿಯಿಂದ ಹೆಚ್.ಐ.ವಿ, ಏಡ್ಸ್ ಅರಿವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಮಾಜದಲ್ಲಿ ಏಡ್ಸ್ ಒಂದು ಮಾರಕರೋಗವಾಗಿ ಪರಿಣಮಿಸುತ್ತಿದ್ದು ವಿದ್ಯಾರ್ಥಿಗಳು ಇಂತಹ ಜಾಗೃತಿ ಶಿಬಿರದಲ್ಲಿ ಭಾಗವಹಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕೆಂದರು. ಹಿರಿಯ ಆರೋಗ್ಯ ಸಹಾಯಕಿ ಅನ್ನಪೂರ್ಣಮ್ಮ ಮಾತನಾಡಿ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ಹೆಚ್.ಐ.ವಿಯಲ್ಲಿ ಮೊದಲ ಸ್ಥಾನ ಪಡೆದಿದ್ದು, ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಈ ರೋಗ ಹೆಚ್ಚಾಗುತ್ತಿದೆ ಎಂದರು. ಹಿರಿಯ ಶಿಕ್ಷಕರಾದ ಪರಮೇಶ್ವರಪ್ಪ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಮಾಡಿ ಕಾಲೇಜಿಗೆ ಮತ್ತು ಪೋಷಕರಿಗೆ ಒಳ್ಳೆಯ ಹೆಸರನ್ನು ತಂದುಕೊಡಬೇಕೆಂದರು. ಹಿರಿಯ ಶಿಕ್ಷಕರಾದ ಎಂ.ಬಿ. ಈಶ್ವರಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಎಕೋಕ್ಲಬ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.