ಬಿಜೆಪಿ ಕಾರ್ಯಕರ್ತರಿಂದ ಭಾರಿ ವಿಜಯೋತ್ಸವ
ಕನ್ನಡಪ್ರಭ ವಾರ್ತೆ, ತುಮಕೂರು, ಡಿ.9
ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ತುಮಕೂರು ನಗರದ ಹೆಗ್ಗೆರೆ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಉತ್ತರ ಭಾರತದಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷ ಗೆಲವು ಸಾಧಿಸಿದಕ್ಕೆ ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಎಚ್.ಪಿ. ದಯಾನಂದ್, ಮುಖಂಡರಾದ ಶ್ರೀನಿವಾಸ್, ರಾಜಣ್ಣ, ರಘು, ರವಿ, ಕಿಶೋರ್, ತುಮಕೂರು ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ನರಸಿಂಹಮೂರ್ತಿ, ಎಚ್.ಎಲ್. ಕಾರ್ಯದರ್ಶಿ ಕೃಷ್ಣಪ್ಪ, ವಿಜಯೋತ್ಸವ ಆಚರಿಸಿದರು
ಕೊರಟಗೆರೆ ಮಂಡಲದ ಬೂದಗವಿ ಸಿದ್ದರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉತ್ತರ ಭಾರತದ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ದಿಗ್ವಿಜಯ ಬಾರಿಸಿದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ನಟರಾಜು, ಕಾಮಣ್ಣ, ಜಗದೀಶ್, ರಾಮಣ್ಣ, ತಿಮ್ಮಯ್ಯ, ಶ್ರೀಧರಮೂರ್ತಿ, ರೇವಣ್ಣ ಕರಿಗಿರಿ ಭಾಗವಹಿಸಿದ್ದರು.
ತುರುವೇಕೆರೆಯಲ್ಲಿ ಸಂಭ್ರಮಾಚರಣೆ
ಕನ್ನಡಪ್ರಭ ವಾರ್ತೆ, ತುರುವೇಕೆರೆ, ಡಿ,9
4 ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಯಶಸ್ಸು ಗಳಿಸಿರುವ ಹಿನ್ನೆಲೆಯಲ್ಲಿ ತಾಲೂಕಿನ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.
ಪಟ್ಟಣದಲ್ಲಿರುವ ಬಿಜೆಪಿ ಕಚೇರಿಯ ಮುಂಭಾಗ ಸೇರಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಾರ್ವಜನಿಕರಿಗೆ ಹಾಗೂ ಕಾರ್ಯಕರ್ತರಿಗೆ ಸಿಹಿ ವಿತರಣೆ ಮಾಡಿದರು. ರಾಜ್ಯ ಹಾಗೂ ರಾಷ್ಟ್ರ ಬಿಜೆಪಿ ಮುಖಂಡರಿಗೆ ಜಯಘೋಷ ಹಾಕಿದರು.
ನರೇಂದ್ರ ಮೋದಿಯವರನ್ನು ಮುಂದಿನ ಪ್ರಧಾನಿ ಅಭ್ಯರ್ಥಿ ಎಂದೇ ಬಿಂಬಿಸಲಾಗಿದೆ. ಇದರ ಫಲವಾಗಿ ಇಂದು ವಿಧಾನ ಸಬಾ ಚುನಾವಣೆಯಲ್ಲಿ ಮತದಾರ ಪ್ರಭು ಬಿಜೆಪಿಗೆ ಮನ್ನಣೆ ನೀಡಿದ್ದಾನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಗೆಲವು ಸಾಧಿಸಲಿದೆ ಎಂಬುದಕ್ಕೆ ಈ ಚುನಾವಣೆಯೇ ಸಾಕ್ಷಿ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಅರಳೀಕೆರೆ ರವಿಕುಮಾರ್ ಹೇಳಿದರು.
4 ರಾಜ್ಯಗಳಲ್ಲಿ ಬಂದಿರುವ ಫಲಿತಾಂಶ ರಾಜ್ಯದ ಬಿಜೆಪಿ ಕಾರ್ಯಕರ್ತರಲ್ಲೂ ರಣೋತ್ಸಾಹವನ್ನು ತುಂಬಿದೆ. ಇಂದಿನಿಂದಲೇ ಲೋಕಸಭಾ ಚುನಾವಣೆಯ ತಯಾರಿಗೆ ಹಾದಿಯಾಗಿದೆ. ರಾಜ್ಯದಲ್ಲೂ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆದ್ದು ಮೋದಿಯವರನ್ನು ಪ್ರಧಾನಿಯನ್ನಾಗಿಸಲು ಮುನ್ನುಡಿ ಬರೆಯಲಿದೆ ಎಂದು ಅರಳೀಕೆರೆ ರವಿಕುಮಾರ್ ಹೇಳಿದರು.
ಸಂಭ್ರಮಾಚರಣೆಯಲ್ಲಿ ತಾಲೂಕು ಮಾಜಿ ಬಿಜೆಪಿ ಅಧ್ಯಕ್ಷ ಟಿ.ಎಸ್. ಬೋರೇಗೌಡ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಅನಿತಾ ನಂಜುಂಡಯ್ಯ, ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಾಗರಾಜು, ಮಹಿಳಾ ಮೋರ್ಚಾ ಅಧ್ಯಕ್ಷೆ ಮಮತಾ ಅಶೋಕ್, ಉಪಾಧ್ಯಕ್ಷೆ ನಾಗರತ್ನಮ್ಮ, ಗಾಯತ್ರಿ ಅರಸ್, ಕಾರ್ಯದರ್ಶಿ ಜಯಶೀಲ, ಭಾಗ್ಯಮ್ಮ, ಪಾರ್ವತಮ್ಮ, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಎಂ.ಎಸ್. ವಿರೂಪಾಕ್ಷ ಮುಖಂಡರಾದ ಬ್ಯಾಂಕ್ ಶ್ರೀನಿವಾಸ್, ಕೆಂಪರಾಜು ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

