ತುಮಕೂರು

ಇಂದು ಮಾನವ ಹಕ್ಕುಗಳ ದಿನಾಚರಣೆ

Published On :

ತುಮಕೂರು: ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆ, ದೆಹಲಿ ವತಿಯಿಂದ ತುಮಕೂರಿನ ಜಿಲ್ಲಾ ನಿವೃತ್ತ ನೌಕರರರ ಸಂಘದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಡಿ.10 ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಸಂಸದ ಜಿ.ಎಸ್. ಬಸವರಾಜು ಸಮಾರಂಭ ಉದ್ಘಾಟಿಸಲಿದ್ದಾರೆ. ತುಮಕೂರು ನಗರ ಶಾಸಕ ಡಾ.ರಫೀಕ್ ಅಹಮದ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಮಕೂರು ಗ್ರಾಮಾಂತರ ಶಾಸಕ ಸುರೇಶ್‌ಗೌಡ, ವಿಧಾನಪರಿಷತ್ ಸದಸ್ಯ ಡಾ.ಎಂ.ಆರ್. ಹುಲಿನಾಯ್ಕರ್, ಜಿಪಂ ಅಧ್ಯಕ್ಷೆ ಸಾಕಮ್ಮ ನಟರಾಜ್, ನಗರಸಭಾಧ್ಯಕ್ಷೆ ಗೀತಾ ರುದ್ರೇಶ್ ಪಾಲ್ಗೊಳ್ಳಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಂ.ಆರ್. ಬೋಬಡೆ, ಸಮಾಜ ಸೇವಕಿ ಸಾಕಮ್ಮ ಅವರನ್ನು ಸನ್ಮಾನಿಸಲಾಗುವುದು. ಅಧ್ಯಕ್ಷತೆಯನ್ನು ಜಿಲ್ಲಾ ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆಯ ಅಧ್ಯಕ್ಷ ಆರ್. ಲೋಕೇಶ್ ವಹಿಸಲಿದ್ದಾರೆ. ತುಮಕೂರಿನ ಚಿಕ್ಕಪೇಟೆಯ ಹಿರೇಮಠಾಧ್ಯಕ್ಷ ಡಾ. ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.