ವಿದ್ಯುಚ್ಛಕ್ತಿ ಗ್ರಾಹಕರ ಜಾಗೃತಿ ಕಾರ್ಯಾಗಾರ
ತುಮಕೂರು: ಗುಬ್ಬಿಯ ಸಿಐಟಿ, ಲಯನ್ಸ್ ಕ್ಲಬ್, ಬೆಸ್ಕಾಂ ಮತ್ತು ಬೆಂಗಳೂರಿನ ಸಿಆರ್ಇಎಟಿ ಆಶ್ರಯದಲ್ಲಿ ಇತ್ತೀಚೆಗೆ ತುಮಕೂರಿನ ವಿಘ್ನೇಶ್ವರ ಕಂಫರ್ಟ್ಸ್ಲ್ಲಿ ವಿದ್ಯುಚ್ಛಕ್ತಿ ಗ್ರಾಹಕರ ಜಾಗೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಸಿ.ಐ.ಟಿ ನಿರ್ದೇಶಕ ಮತ್ತು ಗುಬ್ಬಿ ಲಯನ್ಸ್ ಕ್ಲಬ್ನ ಅಧ್ಯಕ್ಷ ಡಾ. ಡಿ.ಎಸ್. ಸುರೇಶ್ ಕುಮಾರ್, ಗ್ರಾಹಕ ಅಧಿಕಾರಗಳ ಜಾಗೃತಿ ಮೂಡಿಸಲು ಶ್ರಮಿಸುತ್ತಿರುವ ಸಿಆರ್ಇಎಟಿ ಬಗ್ಗೆ ಪ್ರಶಂಸಿಸಿದರು.
ಸಿಆರ್ಇಎಟಿ ಸಂಸ್ಥಾಪಕ ಟ್ರಸ್ಟಿ ವೈ.ಜಿ. ಮುರಳಿಧರನ್, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ವಿಶ್ರಾಂತ ತಾಂತ್ರಿಕ ಸಲಹೆಗಾರ ಲಕ್ಷ್ಮಣರೆಡ್ಡಿ, ತುಮಕೂರಿನ ಮಾರುತಿ ವಿದ್ಯಾ ಕೇಂದ್ರದ ಮುಖ್ಯಸ್ಥ ಶೇಷಾದ್ರಿ ಮತ್ತು ತುಮಕೂರು - ಬೆಸ್ಕಾಂನ ಕಾರ್ಯಪಾಲಕ ಎಂಜಿನಿಯರ್ ನಟರಾಜ್ ಅವರು ತಮ್ಮ ಸಿಬ್ಬಂದಿಗಳೊಂದಿಗೆ ಉಪಸ್ಥಿತರಿದ್ದರು.
ಈ ಕಾರ್ಯಾಗಾರದಲ್ಲಿ ತುಮಕೂರು ತಾಲೂಕಿನ ವಿವಿಧ ಗ್ರಾಮೀಣ ಸ್ವಸಹಾಯ ಸಂಘಗಳ ಪ್ರತಿನಿಧಿಗಳು, ಸರ್ಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ವಿದ್ಯುಚ್ಛಕ್ತಿ ಗ್ರಾಹಕರಿಗೆ ಇರುವ ಹಕ್ಕುಗಳ ಬಗ್ಗೆ ಅರಿವು ಪಡೆದು, ತಮ್ಮ ಕುಂದುಕೊರತೆಗಳ ಬಗ್ಗೆ ಇಲಾಖೆಯ ಆಧಿಕಾರಿಗಳೊಂದಿಗೆ ಚರ್ಚಿಸಿದರು.
ಕೆಲವು ಸಮಸ್ಯೆಗಳಿಗೆ ಈ ಕಾರ್ಯಾಗಾರದಲ್ಲಿ ವಿದ್ಯುಚ್ಛಕ್ತಿ ಇಲಾಖಾ ಅಧಿಕಾರಿಗಳು ತೆಗೆದುಕೊಂಡಿರುವ ಪರಿಹಾರಗಳ ಬಗ್ಗೆ ವಿವರಿಸಿ, ತೆಗೆದುಕೊಳ್ಳಬಹುದಾದ ಪರಿಹಾರಗಳನ್ನು ಸೂಚಿಸಿದರು. ಮತ್ತು ಇತರೆ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಸಂಬಂದಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೆ ಸೂಚನೆ ನೀಡಿದರು.
ಸುಮಾರು ನೂರು ಪ್ರತಿನಿಧಿಗಳು ಭಾಗವಹಿಸಿ ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

