ಸ್ವಯಂ ಉದ್ಯೋಗ ಪ್ರಾರಂಭಿಸಿ: ಯುವಕರಿಗೆ ಶಾಸಕರ ಕರೆ
ಶಿರಾ: ಯುವಕರು ಕೈಗಾರಿಕೆ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಸ್ವಯಂ ಉದ್ಯೋಗ ಪ್ರಾರಂಭಿಸಿ ತಮ್ಮ ಜೀವನವನ್ನು ಉತ್ತಮಪಡಿಸಿಕೊಳ್ಳಬೇಕು ಎಂದು ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ಬಾಬು ತಿಳಿಸಿದರು.
ಅವರು ನಗರದ ಶ್ರೀ ಲಕ್ಷ್ಮೀವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ತುಮಕೂರು ವತಿಯಿಂದ ಏರ್ಪಡಿಸಿದ್ದ ತಾಲೂಕು ಮಟ್ಟದ ಉದ್ಯಮಶೀಲತಾ ಜಾಗೃತಿ ಶಿಬಿರ ಹಾಗೂ ಕೈಗಾರಿಕಾ ವಿಚಾರ ಸಂಕಿರಣ ಮತ್ತು 2009-14 ರ ಕೈಗಾರಿಕಾ ನೀತಿಯ ಅರಿವು ಮೂಡಿಸುವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು.
ಉದ್ಯಮಾ ಶೀಲತಾ ತರಬೇತಿಗಳು ನಿರುದ್ಯೋಗಿಗಳಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದು ಇದನ್ನು ಸದುಪಯೋಪಡಿಸಿಕೊಳ್ಳಿ ಎಂದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಜಿ.ಪಂ. ಸದಸ್ಯ ಸಿ.ಆರ್.ಉಮೇಶ್ ಅವರು ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಪ್ರಾರಂಭಿಸಲು ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದಿಂದ ಉತ್ತಮ ಮಾಹಿತಿಯನ್ನು ನೀಡುತ್ತಿದ್ದು ಇದರಿಂದ ನಿರುದ್ಯೋಗ ಸಮಸ್ಯೆ ಬಗೆಹರಿಸಲು ಸಹಾಯಕವಾಗುತ್ತದೆ ಎಂದರು.
ಜಿ.ಪಂ. ಅಧ್ಯಕ್ಷೆ ಸಾಕಮ್ಮ ನಾಗರಾಜು, ತಾ.ಪಂ. ಅಧ್ಯಕ್ಷೆ ಗಂಗಮ್ಮ ಸಿದ್ದಹನುಮಯ್ಯ, ಉಪಾಧ್ಯಕ್ಷ ಸಿ.ಎಸ್. ಉದಯಶಂಕರ್ ಮಾತನಾಡಿದರು. ಜಿ.ಪಂ. ಮಾಜಿ ಉಪಾದ್ಯಕ್ಷೆ ಲಲಿತಮ್ಮ ಮಂಜುನಾಥ್, ಜಿ.ಪಂ. ಸದಸ್ಯರಾದ ಬಿ.ಕೆ.ಬಡೀರಣ್ಣ, ಅರೇಹಳ್ಳಿ ರಮೇಶ್, ಪುಟ್ಟಮಣಿ ಬೊಮ್ಮಣ್ಣ, ಕೆ.ಎಸ್.ಎಫ್.ಸಿ. ಸಹಾಯಕ ಪ್ರಧಾನ ವ್ಯವಸ್ಥಾಪಕ ಉದಯಶಂಕರ್, ಕೆ.ಎಸ್.ಎಸ್.ಐ.ಡಿ.ಸಿ. ಪ್ರಧಾನ ವ್ಯವಸ್ಥಾಪಕ ಸಿ.ಟಿ. ಮೂಡಲಗಿರಯ್ಯ, ಎಸ್.ಬಿ.ಎಂ. ವ್ಯವಸ್ಥಾಪಕ ಭಾಸ್ಕರ್, ಶಿರಾ ಕೈಗಾರಿಕಾ ವಿಸ್ತರಣಾಧಿಕಾರಿ ಜಿ.ಕೆ.ಉಮಾಶಂಕರ್, ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

