ಒಡೆಯರ್ ಅಗಲಿಕೆತುಂಬಲಾರದ ನಷ್ಟ: ಶಾಸಕ ಶ್ರೀನಿವಾಸ್
ಗುಬ್ಬಿ: ಮೈಸೂರು ಸಂಸ್ಥಾನದ ರಾಜಮನೆತನದ ಕೊನೆಯ ಕೊಂಡಿಯಂತಿದ್ದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಅಕಾಲಿಕ ಮರಣದಿಂದ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದ್ದು ಅವರ ಆತ್ಮಕ್ಕೆ ಶಾಂತಿ ಮತ್ತು ನೆಮ್ಮದಿ ನೀಡಲಿ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಪ್ರಾರ್ಥಿಸಿದರು. ಪಟ್ಟಣದಲ್ಲಿ ರಾಜು ಕ್ಷತ್ರಿಯ ಅರಸು ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ದಾನ, ಧರ್ಮದ ಮೂಲಕ ಇಡೀ ಮೈಸೂರು
ಸಂಸ್ಥಾನವನ್ನು ಉನ್ನತ ಶಿಖರಕ್ಕೆ ಕೊಂಡೊಯ್ಯುವಲ್ಲಿ ರಾಜಮನೆತನ ಮಹತ್ವದ ಸಾಧನೆ ಮಾಡಿತ್ತು. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸಾಮಾಜಿಕ ಚಿಂತನೆಯ ಹರಿಕಾರರಾಗಿದ್ದು ಧಾರ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಜನಾನುರಾಗಿಯಾಗಿದ್ದರು. ಅವರ ಅಕಾಲಿಕ ಮರಣ ರಾಜ್ಯಕ್ಕೆ ನಷ್ಟವುಂಟಾಗಿದೆ ಎಂದರು. ಸಾಮಾಜಿಕ, ಧಾರ್ಮಿಕ, ರಾಜಕೀಯ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡುವ ಮೂಲಕ ರಾಜ್ಯದಲ್ಲಿಯೇ ಹೆಸರು ಮಾಡಿದ್ದರು. ದಸರಾ ಆಚರಣೆಯ ಸಂದರ್ಭದಲ್ಲಿ ಎಲ್ಲಾ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕೈಜೋಡಿಸುವ ಮೂಲಕ ಆಕರ್ಷಕ ದಸರಾ ಆಚರಣೆಗೆ ಹೆಚ್ಚಿನ ಸ್ಫೂರ್ತಿ ನೀಡುವ ಮೂಲಕ ಮಹತ್ವದ ಕಾರ್ಯ ಮಾಡುತ್ತಿದ್ದರು. ಅವರ ಸಾಧನೆಗಳು ಇಂದು ಕೇವಲ ನೆನಪು ಮಾತ್ರ ಆಗಿದೆ. ಅಂತಹ ಕ್ರಿಯಾಶೀಲ ವ್ಯಕ್ತಿಯಾಗಿದ್ದ ಅವರ ಮರಣ ಇಡೀ ಸಾಮಾಜಿಕ ಬದುಕಿಗೆ ತುಂಬಲಾರದ ನಷ್ಟವಾಗಿದೆ ಎಂದು ವಿಷಾದಿಸಿದರು.
ಬ್ರಹ್ಮಸಂದ್ರ: ನಾಳೆಯಿಂದ ಬ್ರಹ್ಮರಥೋತ್ಸವ
ಬ್ರಹ್ಮಸಂದ್ರ: ಇಲ್ಲಿನ ಬಯಲಾಂಜನೇಯ ಸ್ವಾಮಿ ದೇವಸ್ಥಾನದ ಅಭಿವೃದ್ಧಿ ಮತ್ತು ಧಾರ್ಮಿಕ ಸೇವಾ ಟ್ರಸ್ಟ್ ವತಿಯಿಂದ ಇದೇ ತಿಂಗಳ 13 ರಿಂದ 15 ರವರೆಗೆ ದ್ವಿತೀಯ ವರ್ಷದ ಬ್ರಹ್ಮರಥೋತ್ಸವ ಕಾರ್ಯಕ್ರಮ ಜರುಗಲಿದೆ. 13 ರಂದು ಬೆಳಗ್ಗೆ 9 ರಿಂದ ಬ್ರಹ್ಮಸಂದ್ರ ಮೂಲ ದೇವಸ್ಥಾನದಲ್ಲಿ ಹೋಮಾದಿಗಳು, ನಂತರ ಗಂಗಾಪೂಜೆ, ಗಣಪತಿ ಹೋಮ, ಮಹಾಸಂಕಲ್ಪ ಪುಣ್ಯಹ, ಪೂಜೆ, ಪಂಚಗವ್ಯ, ರಕ್ಷಾಬಂಧನ, ಅಸ್ತ್ರವಾಹನ ನಡೆಯಲಿದೆ. ಸಂಜೆ 6 ಗಂಟೆಗೆ ಯಾಗೇಶ್ವರಾಧನೆ, ಧ್ವಜಾರೋಹಣ ನಂತರ ಮಂಗಳಾರತಿ ಇದೆ. 14 ರಂದು ರಾತ್ರಿ ತೇರು ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ಇದೆ. 15 ರಂದು ರಾಜಬೀದಿ ಉತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

