ಜೂಜಾಡುತ್ತಿದ್ದ 7 ಮಂದಿ ಬಂಧನ
ಶಿರಾ: ತಾಲೂಕಿನಾದ್ಯಂತ ವಿವಿಧ ಪ್ರಕರಣಗಳು ನಡೆದಿದ್ದು ಜುಂಜರಾಮನಹಳ್ಳಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಜೂಜಾಡುತ್ತಿದ್ದ ಜನರನ್ನು ಬಂಧಿಸಿ ಪಣಕ್ಕಿಟ್ಟಿದ್ದ 23550 ರು.ಗಳನ್ನು ಶಿರಾ ತಾಲೂಕು ಕಳ್ಳಂಬೆಳ್ಳ ಠಾಣಾಧಿಕಾರಿ ಪ್ರಶಾಂತ್ ನೇತೃತ್ವದಲ್ಲಿ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. 7 ಜನ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಜೆಸಿಬಿ ವಶ: ಶಿರಾ ತಾಲೂಕು ಹೇರೂರು, ನಾರಾಯಣಪುರ ಗ್ರಾಮಗಳಲ್ಲಿ ಅಕ್ರಮವಾಗಿ ಮರಳು ದಂಧೆಗೆ ಉಪಯೋಗಿಸುತ್ತಿದ್ದ ಜೆಸಿಬಿಗಳನ್ನು ತಾವರೆಕೆರೆ ಪಿ.ಎಸ್.ಐ. ಚಿದಾನಂದ್ ಮೂರ್ತಿ ಅವರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಸರಗಳನ ಸೆರೆ: ಶಿರಾ ನಗರದಲ್ಲಿ ಮಹಿಳೆಯನ್ನು ವಂಚಿಸಿ ಗಮನ ಬೇರೆಡೆ ಸೆಳೆದು ಚಿನ್ನದ ಸರಗಳನ್ನು ಕದ್ದು ಪರಾರಿಯಾಗಿದ್ದ ಆರೋಪಿ ನಾಗರಾಜ್ ಎಂಬುವನನ್ನು ಬಂಧಿಸಿ ಆರೋಪಿಯಿಂದ ಚಿನ್ನದ ಚೈನ್ಗಳನ್ನು ವಶಪಡಿಸಿಕೊಂಡಿದ್ದಾರೆ. ನಗರ ಠಾಣಾ ಸಿ.ಪಿ.ಐ. ರಾಮಕಣಷ್ಣ, ಪಿ.ಎಸ್.ಐ. ಕೊಟ್ರೇಶ್, ನೇತೃತ್ವದಲ್ಲಿ ಕಾರ್ಯಾರಚಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

