'ಮಹಿಳೆಯರಿಗೆ ಶಿಕ್ಷಣದೊಂದಿಗೆ ಅರಿವು ಅನಿವಾರ್ಯ '
ಕೊರಟಗೆರೆ: ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಲೈಂಗಿಕ ಕಿರುಕುಳ ಹಾಗೂ ಹೆಣ್ಣುಭ್ರೂಣಹತ್ಯೆಯಂತಹ ಪಿಡುಗು ತಡೆಯಬೇಕಾದರೆ ಮಹಿಳೆಯರಿಗೆ ಶಿಕ್ಷಣದೊಂದಿಗೆ ಅರಿವು ಮೂಡಿಸುವುದು ಅನಿವಾರ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಐ.ಎಸ್. ಮಹೇಶ್ ತಿಳಿಸಿದರು.
ಅವರು ಮದ್ದೂರು ತಾಲೂಕಿನ ಆರ್.ಕೆ.ಎಜ್ಯುಕೇಷನ್ ಇನ್ಸ್ಟೀಟ್ಯೂಷನ್ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪಟ್ಟಣದ ಸಂನ್ಮೂಲ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಲಿಂಗ ತಾರತಮ್ಯದ ತಲ್ಲಣಗಳೂ ಸಹಜವೂ-ಅಸಹಜವೂ ಎಂಬ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮುದಾಯದಲ್ಲಿ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಅಂಧಶ್ರದ್ಧೆಗಳಿಂದ ಸಮಾಜದಲ್ಲಿ ಮಹಿಳೆ ಕಿರುಕುಳಕ್ಕೆ ಒಳಗಾಗುತ್ತಿದ್ದು ಆಕೆ ಅನುಭವಿಸುತಿರುವ ಅಪಮಾನಕ್ಕೆ ಮಿತಿಯೇ ಇಲ್ಲದಂತಾಗಿದೆ ಇದಕ್ಕೆ ಮೂಲಕ ಕಾರಣ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡದಿರುವುದು, ಅವರಿಗೆ ಉತ್ತಮ ಭವಷ್ಯ ರೊಪಿಸದಿರುವುದು ಎಂದರು.
ಈ ಸಂದರ್ಭದಲ್ಲಿ ಡಯಟ್ನ ಉಪನ್ಯಾಸಕಿ ತಾರಾ, ಇಸಿಒ ಕೋಟೆಕಲ್ಲಪ್ಪ, ಎಚ್.ಎನ್. ಕೃಷ್ಣಪ್ಪ, ಆರ್.ಕೆ. ವಿದ್ಯಾಸಂಸ್ಥೆಯ ಜಯರಾಂ, ಸಂದೇಶ, ತಿಮ್ಮರಾಯಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದು ಈ ಸಂವಾದ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಪ್ರೌಢಶಾಲೆಗಳಿಂದ ಆಗಮಿಸಿದ್ದ ಸುಮಾರು 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

