ಕಂಪ್ಯೂಟರ್ ಜ್ಞಾನದಿಂದ ಬೆಳವಣಿಗೆ ಸಾಧ್ಯ'
ತಿಪಟೂರು: ಮಾನವ ಸಂಪನ್ಮೂಲಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಪ್ಯೂಟರ್ ಜ್ಞಾನ ಹೊಂದುವುದರಿಂದ ಸಮಯದ ಉಳಿತಾಯದ ಜೊತೆಗೆ ಉತ್ತಮ ಬೆಳವಣಿಗೆ ಹೊಂದಲು ಸಾಧ್ಯ ಎಂದು ಬೆಂಗಳೂರಿನ ಸೂಕ್ಷ್ಮ, ಸಣ್ಣ ಮತ್ತು ಮಾಧ್ಯಮ ಉದ್ಯಮಗಳ ಅಭಿವೃದ್ಧಿ ಸಂಸ್ಥೆ ಉಪನಿರ್ದೇಶಕರಾದ ಸುಧಾಕರ್ ತಿಳಿಸಿದರು.
ಪಟ್ಟಣದ ಶಂಕರ್ ಕಂಪ್ಯೂಟರ್ ಟ್ರೈನಿಂಗ್ ಸೆಂಟರ್ ಆವರಣದಲ್ಲಿ ಏರ್ಪಡಿಸಿದ್ದ ಕಂಪ್ಯೂಟರ್ ಅಕೌಂಟಿಂಗ್ ಮತ್ತು ಟ್ಯಾಲಿ ತರಬೇತಿ ಸಮಾರೋಪ ಸಮಾರಂಭ ಹಾಗೂ ತರಬೇತಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಅವರು ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಕಂಪ್ಯೂಟರ್ ಅತ್ಯಾವಶ್ಯಕವಾಗಿದ್ದು, ಇಂತಹ ತರಬೇತಿಗಳಿಂದ ಕಂಪ್ಯೂಟರ್ ಕಲಿತುಕೊಂಡಲ್ಲಿ ಮುಂದೆ ಸ್ವಾವಲಂಬಿ ಬದುಕನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದರು.
ಕಲ್ಪತರು ಕಾಲೇಜಿನ ಉಪನ್ಯಾಸಕ ದಿಲೀಪ್ ಕುಮಾರ್ ಎಂ.ಷಾ ಮಾತನಾಡಿ ದೇಶದಲ್ಲಿ ಶೇ.51ರಷ್ಟು ಜನಸಂಖ್ಯೆ ಕಂಪ್ಯೂಟರ್ ಜ್ಞಾನ ಹೊಂದಿದ್ದು, ತಾಂತ್ರಿಕ ಜ್ಞಾನ ಹೊಂದಬೇಕಾಗಿದೆ. ಅಲ್ಲದೆ ದೇಶ ಸಮೃದ್ಧಿ ಆಗಬೇಕಾದರೆ ಮೊದಲು ನಾವುಗಳೆಲ್ಲರೂ ಸುಸಂಸ್ಕೃತರಾಗಬೇಕು ಎಂದರು.
ಶಂಕರ್ ಕಂಪ್ಯೂಟರ್ ಟ್ರೈನಿಂಗ್ ಸೆಂಟರ್ ಪ್ರಾಚಾರ್ಯ ಶಿವಪ್ರಕಾಶ್ ಮಾತನಾಡಿ ನಮ್ಮ ಸಂಸ್ಥೆಯಲ್ಲಿ ಗ್ರಾಮೀಣ ನಿರುದ್ಯೋಗ ಹೊಗಲಾಡಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

