ಎಸ್ಮಾ ಕಾಯ್ದೆ ವಾಪಸ್ ತೆಗೆದುಕೊಳ್ಳಿ
ಕ.ಪ್ರ.ವಾರ್ತೆ ತುಮಕೂರು ಡಿ.12
ರಾಜ್ಯ ಸರ್ಕಾರ ಪ್ರಜಾಪ್ರಭುತ್ವ ಹಾಗೂ ಕಾರ್ಮಿಕ ವಿರೋಧಿ ಎಸ್ಮಾ ಕಾಯ್ದೆಯನ್ನು ಈ ಕೂಡಲೇ ವಾಪಸ್ ತೆಗೆದುಕೊಳ್ಳಬೇಕೆಂದು ಸಿಐಟಿಯು ಆಗ್ರಹಿಸಿದೆ.
ಪಾರ್ಲಿಮೆಂಟ್ ಮುತ್ತಿಗೆ ಬೆಂಬಲಿಸಿ, ಎಸ್ಮಾ ಕಾಯ್ದೆ ವಿರೋಧಿಸಿ ಹತ್ತು ಹಲವಾರು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ತುಮಕೂರಿನಲ್ಲಿ ಸಿಐಟಿಯು ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ನಿರಂತರವಾಗಿ ಹೆಚ್ಚಳವಾಗುತ್ತಿರುವ ಅತ್ಯವಸ್ತುಗಳ ಬೆಲೆ ಏರಿಕೆಯ ನಿಯಂತ್ರಣಕ್ಕೆ ಕೈಗೊಳ್ಳದ ಕೇಂದ್ರ-ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ಪಡಿತರ ವ್ಯವಸ್ಥೆಯ ಸಾರ್ವತ್ರಿಕರಣ-ಉದ್ಯೋಗ ಸೃಷ್ಟಿಗೆ ಒತ್ತಾಯಿಸಿ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ನಿಧಿ ಸ್ಥಾಪಿಸಿ ಕಲ್ಯಾಣ ಯೋಜನೆಗಳನ್ನು ಜಾರಿಗಳಿಸಲು ಹಾಗೂ ನಿರಂತರ ಸ್ವರೂಪದ ಕೆಲಸಗಳಲ್ಲಿನ ಗುತ್ತಿಗೆ ಕಾರ್ಮಿಕರ ಸೇವೆಗಳನ್ನು ಕಾಯಂಗೊಳಿಸಲು ಆಗ್ರಹಿಸಿತು.
ಅಲ್ಲದೇ ಕನಿಷ್ಠ ವೇತನ 10 ಸಾವಿರ ರು.ಗೆ ಕಡಿಮೆ ಇಲ್ಲದಂತೆ ಜಾರಿಗೊಳಿಸಿ ಒತ್ತಾಯಿಸಿ ಸ್ಕೀಂ ನೌಕರರಾದ ಅಂಗನವಾಡಿ, ಆಶಾ, ಬಿಸಿಯೂಟ ಕೆಲಸಗಾರರನ್ನು ಕಾರ್ಮಿಕರೆಂದು ಪರಿಗಣಿಸಿ ಸೇವಾ ಷರತ್ತುಗಳನ್ನು ಜಾರಿಗೊಳಿಸಲು ಒತ್ತಾಯಿಸಿ ದುಡಿಯುವ ಎಲ್ಲಾ ಕಾರ್ಮಿಕರಿಗೂ ಇಳಿವಯಸ್ಸಿನಲ್ಲಿ ಪಿಂಚಣಿ ಯೋಜನೆ ಕಾರ್ಮಿಕ ಕಾನೂನುಗಳ ಕಠಿಣ ಅನುಷ್ಠಾನಕ್ಕೆ ಒತ್ತಾಯಿಸಿ ಎಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳು ಪಾರ್ಲಿಮೆಂಟ್ ಎದುರು ಇಂದು ನಡೆಸುತ್ತಿರುವ ಚಳವಳಿಯನ್ನು ಬೆಂಬಲಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಹಿಂತೆಗೆದುಕೊಳ್ಳಿ: ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆಯನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಅವರು ಮಾತನಾಡುತ್ತಾ ರಾಜ್ಯ ಸರ್ಕಾರ ಪ್ರಜಾಪ್ರಭುತ್ವ ಕಾರ್ಮಿಕ ವಿರೋಧಿ ಎಸ್ಮಾ ಕಾಯಿದೆಯನ್ನು ಕೂಡಲೇ ವಾಪಸ್ ಪಡೆಯಬೇಕು. ಮುನಿಸಿಪಾಲಿಟಿಗಳಲ್ಲಿ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಅಲ್ಲಿಯವರೆಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದರು.
ಕೇಂದ್ರ ಕಾರ್ಮಿಕ ಸಂಘಟನೆಗಳು ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಬೇಕೆಂದರು.
ಅಂಗನವಾಡಿ ನೌಕರರ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕಮಲ ಅವರು ಮಾತನಾಡುತ್ತಾ ಅಂಗನವಾಡಿ ಕೇಂದ್ರಗಳನ್ನು ಖಾಸಗಿಯವರಿಗೆ ವಹಿಸಲು ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗಳು ಕೂಡಲೇ ವಾಪಸ್ ಪಡೆಯಬೇಕೆಂದರು.
ಸ್ವಾಸ್ತ್ಯ ಬೀಮಾ ಯೋಜನೆ: ಬಿ. ಉಮೇಶ್ ಅವರು ಮಾತನಾಡುತ್ತಾ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಅವಲಂಬಿತರಿಗೆ ಸ್ವಾಸ್ತ್ಯ ಬೀಮಾ ಯೋಜನೆಗೆ ಒಳಪಡಿಸಬೇಕೆಂದರು.
ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಹ್ಮಣ್ಯ ಮಾತನಾಡುತ್ತಾ ರಾಜ್ಯದಲ್ಲಿರುವ ಸರ್ ಎಂ.ವಿಶ್ವೇಶ್ವರಯ್ಯನವರು ಸ್ಥಾಪಿಸಿ ವಿ.ಎಸ್.ಐ.ಎಲ್ ಕಾರ್ಖಾನೆಯನ್ನು ಖಾಸಗಿಕರಣ ಮಾಡಬಾರದೆಂದು ಆಗ್ರಹಿಸಿದರು.
ಗ್ರಾಮ ಪಂಚಾಯಿತಿ ನೌಕರರಿಗೆ ಅಧಿಸೂಚಿತ ಕನಿಷ್ಟ ಕೂಲಿಯನ್ನು ಕಡ್ಡಾಯವಾಗಿ ಜಾರಿ ಮಾಡಬೇಕೆಂದರು. ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಲೋಕೇಶ್, ತಾಲೂಕು ಕಾರ್ಯದರ್ಶಿ ಷಣ್ಮುಕಪ್ಪ, ಕೆ.ಎಸ್.ಆರ್.ಟಿ.ಸಿ. ನೌಕರರ ಫೆಡರೇಷನ್ನ ಜಿಲ್ಲಾಧ್ಯಕ್ಷ ದೇವರಾಜು, ಸಿಐಟಿಯು ಜಿಲ್ಲಾ ಕಾರ್ಯದರ್ಶಿ, ನೌಶಾದ್ ಸೆಹಗನ್, ಮುಂತಾದವರು ಮಾತನಾಡಿದರು. ಕಾರ್ಮಿಕರು ಟೌನ್ಹಾಲ್ ವೃತ್ತದ ಬಳಿ ಸಮಾವೇಶಗೊಂಡು ಬಿ.ಹೆಚ್.ರಸ್ತೆ, ಎಂ.ಜಿ.ರಸ್ತೆ, ಅಶೋಕರಸ್ತೆ ಮುಖಾಂತರ ಜಿಲ್ಲಾಧಿಕಾರಿಗಳ ಕ:ಕೇರಿವರೆಗೆ ಮೇರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮುಖೇನ ಮನವಿಯನ್ನು ಸಲ್ಲಿಸಲಾಯಿತು.
ಪ್ರತಿಭಟನಾ ನೇತೃತ್ವವನ್ನು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ನಿಸಾರ್ ಅಹಮದ್, ತಿಪಟೂರು ತಾಲೂಕಿನ ಅಧ್ಯಕ್ಷ ಅನುಸೂಯ, ಪಾವಗಡ ತಾಲೂಕಿನ ಅಧ್ಯಕ್ಷರಾದ ಸುಶೀಲ, ಕೊರಟಗೆರೆ ತಾಲೂಕಿನ ಅಧ್ಯಕ್ಷರಾದ ವಿಜಯಮ್ಮ, ಕಟ್ಟಡ ಕಾರ್ಮಿಕ ಸಂಘಟನೆಯ ರಾಮಚಂದ್ರು, ಸಿದ್ದಗಂಗಯ್ಯ, ಬೀಡಿ ಕಾರ್ಮಿಕ ಸಂಘಟನೆಯ ಮುಖಂಡರಾದ ರಫೀಕ್, ಪಾವಗಡ ತಾಲೂಕು ಕಾರ್ಯದರ್ಶಿ ಹನುಮಂತರಾಯಪ್ಪ, ತುಮಕೂರು ತಾಲೂಕಿನ ಕಾರ್ಯದರ್ಶಿ ಪಂಚಾಕ್ಷರಿ, ಕರ್ನ್ಲಿಬರ್ಸ್ ಕಾರ್ಮಿಕ ಸಂಘಟನೆಯ ಮುಖಂಡರಾದ ರಾಘವೇಂದ್ರ, ವಿನಾಯಕ ಸಿ.ಎನ್.ಸಿ.ಯ ಮುಖಂಡರಾಧ ವಿಜಯ್, ಓಬೇದುಲ್ಲಾ ಮುಂತಾದವರು ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

