ಗ್ರಾಪಂ ಸಿಬ್ಬಂದಿಗೆ ಸಮರ್ಪಕ ಮಾರ್ಗದರ್ಶನ ನೀಡಿ
ಕುಣಿಗಲ್: ರಾಜ್ಯ ಸರ್ಕಾರವು ಗ್ರಾಮ ಪಂಚಾಯಿಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಕೈಗೊಂಡ ಕ್ರಮ ಸ್ವಾಗತಾರ್ಹವಾಗಿದ್ದರೂ ತಾಲೂಕಿನ ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ಮಾಸಲಾದ ಹಾಗೂ ನಿಯಮಾನುಸಾರ ರಾಷ್ಟ್ರಧ್ವಜ ಹಾರಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಕರವೇ ತಾಲೂಕು ಅಧ್ಯಕ್ಷ ಮಂಜುನಾಥ್ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರವು ಗ್ರಾಮಾಂತರ ಪ್ರದೇಶದ ಜನತೆಯಲ್ಲಿ ರಾಷ್ಚ್ರೀಯ ಭಾವೈಕ್ಯತೆ ಸೇರಿದಂತೆ ರಾಷ್ಟ್ರಧ್ವಜದ ಬಗ್ಗೆ ಗೌರವಯುತ ಭಾವನೆ ಮೂಡಿಸುವ ನಿಟ್ಟಿನಲ್ಲಿ ಗ್ರಾಪಂ ಕಾರ್ಯಾಲಯದ ಮೇಲೆ ರಾಷ್ಟ್ರಧ್ವಜ ಆರೋಹಣಕ್ಕೆ ಕ್ರಮ ಕೈಗೊಂಡಿದೆ. ಆದರೆ ಡಿ.ಹೊಸಹಳ್ಳಿ ಗ್ರಾಪಂನಲ್ಲಿ ಕೊಲೊಂದಕ್ಕೆ ರಾಷ್ಟ್ರಧ್ವಜ ಕಟ್ಟಲಾಗಿದ್ದು ಬೆಳಗಾದರೆ ಕೋಲು ಸಮೇತ ಹೊರಗಿಚ್ಚು ರಾತ್ರಿ ಒಳಗೆ ತೆಗೆದುಕೊಂಡು ಹೋಗುವ ಪರಿಪಾಠ ಇದೆ. ಇನ್ನು ಇದೇ ಗ್ರಾಪಂ ನಲ್ಲಿ ರಾಷ್ಟ್ರಧ್ವಜದ ಕೆಸರಿ ಬಣ್ಣ ಸಂಪೂರ್ಣ ಮಸುಕಾಗಿದ್ದು ಹಸಿರು ಬಣ್ಣಕ್ಕೂ ಇದೆ ಗತಿಯಾಗಿದೆ. ಇದೇ ರೀತಿಯಾಗಿ ತಾಲೂಕಿನ ಬಹುತೇಕ ಗ್ರಾಪಂಗಳಲ್ಲೂ ರಾಷ್ಟಧ್ವಜ ಮಾಸಲಾಗಿರುವ ಹಾಗೂ ನೆಪಮಾತ್ರಕ್ಕೆ ಕೊಲೊಂದಕ್ಕೆ ಕಟ್ಟಿ ಹಾರಿಸುತ್ತಿದ್ದು, ಸಂಬಂಧಪಟ್ಟ ಇಲಾಖಾಧಿಕಾರಿಗಳು ಈ ನಿಟ್ಟಿನಲ್ಲಿ ಗ್ರಾಪಂ ಸಿಬ್ಬಂದಿಗಳಿಗೆ ಸಮರ್ಪಕ ಮಾರ್ಗದರ್ಶನ ಹಾಗೂ ಮಾಹಿತಿ ನೀಡಿ ರಾಷ್ಟ್ರಧ್ವಜದ ಗೌರವ, ಘನತೆ ಸಂರಕ್ಷಿಸಲು ಮುಂದಾಗುವಂತೆ ಆಗ್ರಹಿಸಿದ್ದಾರೆ.
ವಿದ್ಯಾರ್ಥಿನಿಯರು ವಸತಿ ಶಾಲೆಯಲ್ಲಿ ಶುಚಿತ್ವ ಕಾಪಾಡಿಕೊಳ್ಳಲಿ
ಶಿರಾ: ವಿದ್ಯಾರ್ರ್ಥಿನಿಯರು ವಸತಿ ಶಾಲೆಯಲ್ಲಿ ಶುಚಿತ್ವವನ್ನು ಕಾಪಾಡಿಕೊಂಡು, ಆರೋಗ್ಯದಿಂದ ಇರಬೇಕು ಹಾಗೂ ಪರಿಸರ ಸ್ವಚ್ಛತೆಯನ್ನು ಕಾಪಾಡಿಕೊಂಡು ಬರಬೇಕೆಂದು ಜಿ.ಪಂ. ಸದಸ್ಯ ಅರೇಹಳ್ಳಿ ರಮೇಶ್ ಕರೆ ನೀಡಿದರು. ಅವರು ಶಿರಾ ತಾಲ್ಲೂಕು ಚಿಕ್ಕನಹಳ್ಳಿಯ ಕರ್ನಾಟಕ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ನಿಲಯದಲ್ಲಿ ಜಿಲ್ಲಾ ಪಂಚಾಯ್ತಿ, ತುಮಕೂರು ಶಿರಾ ಶಿಕ್ಷಣ ಇಲಾಖೆ, ಗ್ಯಾಟ್ ಸಂಸ್ಥೆ, ಶಿರಾ ಇವುಗಳ ಸಂಯುಕ್ತಾಶ್ರಯದಲ್ಲಿ ನಿಲಯದ ಬಾಲಕಿಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಸಮವಸ್ತ್ರ, ಪುಸ್ತಕ ವಿತರಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ಚಿಕ್ಕನಹಳ್ಳಿ ಗ್ರಾ.ಪಂ. ಅಧ್ಯಕ್ಷರಾದ ಕೃಷ್ಣಮೂರ್ತಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಸದಸ್ಯರಾದ ಕಾಳೇಗೌಡ, ಗ್ಯಾಟ್ ಸಂಸ್ಥೆ ಕಾರ್ಯದರ್ಶಿ ಸಿ.ಮಾಲಿ ಮರಿಯಪ್ಪ, ಡಾ. ಭಾಸ್ಕರ್, ಡಾ.ರಾಜು, ಸಿ.ಆರ್.ಪಿ. ನಾಗರಾಜು, ಪ್ರಸಾದ್, ರಂಗರಾಜು, ಪ್ರಕಾಶ್, ಎಸ್.ಡಿ.ಎಂ.ಸಿ ಸದಸ್ಯರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

