ಮೂಗನಹಳ್ಳಿಯಲ್ಲಿ ಮದ್ಯವರ್ಜನ ಶಿಬಿರ
ಶಿರಾ: ಜೀವನವೆಂಬುದು ಮಾನವನಿಗೆ ದೊರೆತ ಅತ್ಯಮೂಲ್ಯವಾದ ಬಳುವಳಿಯಾಗಿದೆ ಎಂದು ಪಿ.ಕೆ.ಪುರುಷೋತ್ತಮ್ ತಿಳಿಸಿದರು. ಅವರು ಶಿರಾ ತಾಲೂಕು ಮೂಗನಹಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಕರ್ನಾಟಕ ರಾಜ್ಯ ಮದ್ಯಪಾನ ಸ್ವಯಂ ಮಂಡಲಿ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮೂಗನಹಳ್ಳಿ ಹಾಗೂ ಸ್ಥಳೀಯ ಸಂಘಸಂಸ್ಥೆಗಳು ಮತ್ತು ದಾನಿಗಳ ಸಂಯಕ್ತಾಶ್ರಾಯದಲ್ಲಿ ಮೂಗನಹಳ್ಳಿ ಅಮ್ಮಾಜಿ ಕಾವಲೇಶ್ವರಿ ದೇವಸ್ಥಾನದ ಯಾತ್ರಾ ನಿವಾಸದಲ್ಲಿ ಹಮ್ಮಿಕೊಂಡಿರುವ ಮದ್ಯವರ್ಜನ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಇಲ್ಲಿಯವರೆಗೆ ಈ ಯೋಜನೆ ವತಿಯಿಂದ 648 ಮದ್ಯವರ್ಜನ ಶಿಬಿರಗಳನ್ನು ನಡೆಸಿದ್ದು 39000 ಕುಟುಂಬದವರು ಕುಡಿತವನ್ನು ಬಿಟ್ಟು ಹೊಸ ಜೀವನವನ್ನು ಪ್ರಾರಂಭಿಸಿದ್ದಾರೆ. ಹಾಗೆಯೇ ಇದು 649ನೇ ಮಧವರ್ಜನ ಶಿಬಿರ. ಶಿಬಿರದ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗುರುಪೂಜಾರ್ ನಿತ್ಯಾನಂದ ಸ್ವಾಮೀಜಿಯವರು ವಹಿಸಿದ್ದು ಇತ್ತೀಚಿನ ದಿನಗಳಲ್ಲಿ ಕುಡಿತದ ಚಟಕ್ಕೆ ಬಲಿಯಾದ ಅದೆಷ್ಟೋ ಕುಟುಂಬಗಳು ನಲುಗಿ ಹೋಗಿದ್ದು ಈ ನಿಟ್ಟಿನಲ್ಲಿ ಮದ್ಯವ್ಯಸನಿಗಳನ್ನು ಬದಲಾವಣೆ ಮಾಡುವ ಕೆಲಸ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆಯುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಟಿ.ತಿಮ್ಮಣ್ಣ, ಬಾಂಬೆ ರಾಜಣ್ಣ ಮತ್ತು ಶಿಬಿರಾಧಿಕಾರಿಗಳಾದ ಭಾಸ್ಕರ್, ಆರೋಗ್ಯ ಸಹಾಯಕಿ ಜಯಲಕ್ಷ್ಮಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

