'ಪ್ರತಿಭೆ ಜೀವನ ರೂಪಿಸುತ್ತದೆ: ವಿಶಾಲಾಕ್ಷಿ'
ಶಿರಾ: ಕಲಿತ ವಿದ್ಯೆ ಜೀವನದ ಮಾರ್ಗ ತೊರಿಸುತ್ತದೆ, ಪ್ರತಿಭೆ ಜೀವನ ರೂಪಿಸುತ್ತದೆ. ಇದರಿಂದ ವಿದ್ಯಾರ್ಥಿ ಜೀವನದಿಂದಲೇ ಪರಿಪೂರ್ಣ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯವೆಂದು ಹುಲಿಕುಂಟೆ ಜಿಲ್ಲಾ ಪಂಚಾಯತಿ ಸದಸ್ಯೆ ವಿಶಾಲಾಕ್ಷಿ ಹೇಳಿದರು.
ಅವರು ಶಿರಾ ತಾಲೂಕಿನ ಲಕ್ಕನಹಳ್ಳಿ ಅರುಣೋಧಯ ವಿದ್ಯಾ ಸಂಸ್ಥೆಯಲ್ಲಿ ಆಯೋಜಿಸಿದ್ದ ಕ್ಲಸ್ಟರ್ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಸಂಕುಚಿತ ಮನೋಭಾವ ದೂರ ಮಾಡಿ ಗೆಲ್ಲಲೇಬೇಕೆಂಬ ಛಲ ರೂಡಿಸಿಕೊಂಡಾಗ ಯಶಸ್ಸಿನ ಹಾದಿ ಸುಗಮವಾಗಲಿದೆ ಎಂದರು. ಶಿಕ್ಷಣ ಸಂಪನ್ಮೂಲ ವ್ಯಕ್ತಿ ತಿಪ್ಪೇಸ್ವಾಮಿ ಮಾತನಾಡಿ ಕಲಿಕೆಯಂತೆ ಇತರೆ ಚಟುವಟಿಗಳ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದಾಗ ಮಕ್ಕಳಲ್ಲಿರುವ ಪ್ರತಿಭೆ ಪ್ರದರ್ಶನ ಸಾಧ್ಯವೆಂದರು. ಅರುಣೋದಯ ಶಾಲೆಯ ಅಧ್ಯಕ್ಷ ಕೆ.ಮಂಜುನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖಂಡ ಪ್ರಕಾಶ್ ಗೌಡ, ತಡಕಲೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಕುಸುಮ, ಮಾಜಿ ಅಧ್ಯಕ್ಷ ಎಲ್.ಬಿ.ನರಸಿಂಹಯ್ಯ, ಸಿಆರ್ಪಿ ಲಕ್ಷ್ಮಣ್, ಮುಖ್ಯ ಶಿಕ್ಷಕ ನಾಗರಾಜು, ಅಂಬಿಕಾ, ಚಂದ್ರಶೇಖರ, ಸವದತ್ತಿ, ಮುಬಾರಕ್ ಸೇರಿದಂತೆ ಹಲವರು ಹಾಜರಿದ್ದರು. ಶಿಕ್ಷಕ ಸುರೇಶ್ ಸ್ವಾಗತಿಸಿ, ಶೇಖ್ ಮಹಮದ್ ಅಲಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

