ತುಮಕೂರು

ಪೋಷಕರು ತಮ್ಮ ಮಕ್ಕಳ ಕುರಿತು ಎಚ್ಚರಿಕೆ ವಹಿಸಲಿ

Published On :

ಕುಣಿಗಲ್: ಪೋಷಕರು ತಮ್ಮ ಮಕ್ಕಳಿಗೆ ಮೊಬೈಲ್, ಟಿವಿ ಸೇರಿದಂತೆ ಇತರೆ ವಿದ್ಯುನ್ಮಾನ ಮಾಧ್ಯಮಗಳಿಂದ ದೂರವಿಟ್ಟು ಅವಶ್ಯಕತೆಗೆ ತಕ್ಕಂತೆ ಬಳಸುವ ಕಲೆ ಕಲಿಸಿದಾಗ ಮಕ್ಕಳ ಶೈಕ್ಷಣಿಕ ಮತ್ತು ಬೌದ್ಧಿಕ ಹಾಗೂ ಕ್ರೀಡಾ ಪ್ರಗತಿಗೆ  ಸಹಕಾರಿಯಾಗುತ್ತದೆ ಎಂದು ಕ್ರಿಕೆಟ್ ಪಟು ದೊಡ್ಡಗಣೇಶ್ ಪೋಷಕರಿಗೆ ಕಿವಿಮಾತು ಹೇಳಿದರು.
ಶನಿವಾರ, ತಾಲೂಕಿನ ಗಿರಿಗೌಡನಪಾಳ್ಯದಲ್ಲಿನ ಅರವಿಂದ ಇಂಟರ್‌ನ್ಯಾಷನಲ್ ಸ್ಕೂಲ್‌ನ ವಾರ್ಷಿಕ ಶಾಲಾ ಕ್ರೀಡಾ ಪಂದ್ಯಾವಳಿಗಳನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮಕ್ಕಳು ಎಲ್ಲಾ ವಿಧಧ ಕ್ರೀಡೆಗಳಲ್ಲಿ ಕ್ರೀಡಾಮನೋಭಾವದಿಂದ ಪಾಲ್ಗೊಳ್ಳಬೇಕು, ಗೆದ್ದಾಗ ಹಿಗ್ಗದೆ, ಸೋತಾಗ ಕುಗ್ಗದೆ ವಿಶಾಲ ಮನೋಭಾವ ರೂಡಿಸಿಕೊಂಡು ಕ್ರೀಡೆಗಳಲ್ಲಿ ಬದ್ಧತೆಯಿಂದ, ಏಕಾಗ್ರತೆಯಿಂದ ಪಾಲ್ಗೊಂಡಾಗ ಉತ್ತಮ ಸಾಧನೆ ಮಾಡಬಹುದಾಗಿದೆ ಎಂದರು.
ಬಹುತೇಕ ಪೋಷಕರು ಕೇವಲ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಒಲವು ತೋರುತ್ತಾ ಮಕ್ಕಳನ್ನು ಕ್ರೀಡೆಗಳಿಂದ ದೂರ ಉಳಿಸುವಂತೆ ಗಂಭೀರ ತಪ್ಪು ಮಾಡುತ್ತಿರುವುದು ಖೇದಕರ, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಬಗ್ಗೆ ಮಕ್ಕಳಿಗೆ ಸಮಾನ ಒಲವನ್ನು ತೋರಿಸುವ ಗುಣಲಕ್ಷಣಗಳನ್ನು ಪೋಷಕರು ಹೇಳಿಕೊಟ್ಟಾಗ, ಅಂತಹ ಮಕ್ಕಳು ಪರಿಪೂರ್ಣ ವ್ಕಕ್ತಿಯಾಗಿ ರೂಪುಗೊಂಡು ಉತ್ತಮ ಹಾಗೂ ಸಂತೃಪ್ತ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.
ಶಾಲೆಯ ಸಂಸ್ಥಾಪಕ ಎಂ.ಕೆ.ಅಶೋಕ್, ರಣಜಿ ಕ್ರಿಕೆಟ್ ಪಟು ಉಮೇಶ್, ಪ್ರಾಚಾರ್ಯ ದರ್ಶನ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಶಾಲಾ ಮಕ್ಕಳಿಂದ ಆಕರ್ಷಕ ಕವಾಯತು, ಕರಾಟೆ ಸೇರಿದಂತೆ ವಿವಿಧ ಸಾಹಸ ಕ್ರೀಡೆಗಳ ಪ್ರದರ್ಶನ  ಏರ್ಪಡಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.