ತುಮಕೂರು

ಟ್ಯೂಷನ್ ಹಾವಳಿ ಆರೋಪ: ಉಪ ನಿರ್ದೇಶಕ ಜಯಪ್ರಕಾಶ್ ಭೇಟಿ

Published On :

ಪಾವಗಡ: ಸರ್ಕಾರಿ ಪದವಿ ಕಾಲೇಜಿನಲ್ಲಿ ಟ್ಯೂಷನ್ ಹಾವಳಿ ಆರೋಪದ ಹಿನ್ನಲೆಯಲ್ಲಿ ಸೋಮವಾರ ಜಿಲ್ಲಾ
ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕ ಜಯಪ್ರಕಾಶ್ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರ ಸಭೆ ನಡೆಸಿ ಟ್ಯೂಶನ್ ಹಾವಳಿಯ ಬಗ್ಗೆ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಉಪನ್ಯಾಸಕರನ್ನು ತರಾಟೆಗೆ ತೆಗೆದುಕೊಂಡರು. ಹಣದ ಆಸೆಗೆ ಕಾಲೇಜಿನಲ್ಲಿ ಟ್ಯೂಷನ್ ನಡೆಸುವ ಉಪನ್ಯಾಸಕರ ವಿವರ ಪಡೆದು ಪರಿಶೀಲನೆ ನಡೆಸಿ ಟ್ಯೂಷನ್ ಹೆಸರಿನಲ್ಲಿ ಹಣ ಮಾಡುವ ಉಪನ್ಯಾಸಕರ ಬಗ್ಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿ ಟ್ಯೂಷನ್ ಹೆಸರಿನಲ್ಲಿ ಬಡ ವಿದ್ಯಾರ್ಥಿಗಳಿಂದ ಹಣ ವಸೂಲಾತಿ ಮಾಡುವ ದಂಧೆ ಕಾಲೇಜಿನಲ್ಲಿ ಇದೇ ರೀತಿ ಮುಂದುವರಿದರೆ ಕಾನೂನು ರೀತ್ಯ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದರು.
ಇದೇ ಸಂದರ್ಭದಲ್ಲಿ ದಲಿತ ವಿಮೋಚನೆ ಸೇನೆಯ ತಾ.ಅಧ್ಯಕ್ಷ ವಿರಪಸಮುದ್ರ ರಾಮಾಂಜಿನಪ್ಪ ಮಾತನಾಡಿ ತಾಲೂಕಿನಲ್ಲಿ ಬಡವ ಹಾಗೂ ದಲಿತ ಹಿಂದುಳಿದ ವರ್ಗದ ಮಕ್ಕಳೇ ಹೆಚ್ಚಾಗಿರುವುದರಿಂದ ಟ್ಯೂಷನ್ ಶುಲ್ಕ ಕಟ್ಟಲು ಸಾಧ್ಯವಾಗುತ್ತಿಲ್ಲ. ಬಹುತೇಕ ಬಡ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳನ್ನು ಅವಲಂಬಿಸಿರುವುದರಿಂದ ಟ್ಯೂಷನ್ ಹಾವಳಿ ತಪ್ಪಿಸುವಂತೆ ಅವರು ಮನವಿ ಮಾಡಿದರು.
ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಈ. ಶಿವಣ್ಣ ಮಾತನಾಡಿ ಸರ್ಕಾರಿ ಕಾಲೇಜುಗಳಲ್ಲಿ ಬಹುತೇಕ ಬಡ ಮಕ್ಕಳೇ ಹೆಚ್ಚಿಗೆ ವ್ಯಾಸಂಗ ಮಾಡುತ್ತಿದ್ದು ಕಾಲೇಜಿನ ಕೆಲ ಉಪನ್ಯಾಸಕರು ಟ್ಯೂಷನ್ ನೆಪದಲ್ಲಿ ಬಡ ಮಕ್ಕಳನ್ನು ಶೋಷಣೆ ಮಾಡುತ್ತಿದ್ದಾರೆಂದು ಆರೋಪಿಸಿದರು.
ಸುಣ್ಣ ಬಣ್ಣ ಹೊಡೆದು ಕಾಲೇಜ್ ಅಭಿವೃದ್ಧಿಯಾಗಿದೆ ಎಂದರೆ ಸಾಲದು. ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಬೋಧಿಸುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ರೂಪಿಸಬೇಕಿದೆ ಎಂದರು. ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಅಂಜನೇಯ ಸೇರಿದಂತೆ ಉಪನ್ಯಾಸ ವರ್ಗದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.