ಕಿವುಡಾಗಿದೆ ಸರ್ಕಾರದ ಕಿವಿ: ರಾಜಣ್ಣ
ತುಮಕೂರು: ದೇಶದಲ್ಲಿ ಇಂದು ಸಮಸ್ಯೆಗಳು ಜನರನ್ನು ಕಿತ್ತು ತಿನ್ನುತ್ತಿವೆ. ಸರ್ಕಾರದ ಕಿವಿ ಕಿವುಡಾಗುತ್ತಿದೆ ಇಂತಹ ಸಂದರ್ಭದಲ್ಲಿ ಸೈದ್ದಾಂತಿಕ ಚಳುವಳಿ ಮಾತ್ರ ಸರ್ಕಾರದ ಕಿವುಡುತನವನ್ನು ಹೋಗಲಾಡಿಸಿ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗುವಂತೆ ಮಾಡುತ್ತದೆ ಎಂದು ತಿಪಟೂರು ಕಸಾಪ ಅಧ್ಯಕ್ಷ ಉಜ್ಜಜ್ಜಿ ರಾಜಣ್ಣ ಅಭಿಪ್ರಾಯಪಟ್ಟರು.
ತಿಪಟೂರಿನಲ್ಲಿ ಆಯೋಜಿಸಲಾಗಿದ್ದ ಕಟ್ಟಡ ಕಾರ್ಮಿಕರ ಸಮಾವೇಶ ಹಾಗೂ ಕಾರ್ಮಿಕರ ಗುರುತಿನ ಚೀಟಿ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಆದ್ದರಿಂದ ಆ ದಿಕ್ಕಿನಲ್ಲಿ ಸಿಐಟಿಯು ಸೈದ್ಧಾಂತಿಕ ನೆಲೆಯಲ್ಲಿ ಸಂಘಟಿತ ಹೋರಾಟಕ್ಕೆ ಮಾದರಿಯಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಟ್ಟಡ ಕಾರ್ಮಿಕ ಸಂಘಟನೆಯ ರಾಜ್ಯ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಬಿ. ಉಮೇಶ್ ಕಾರ್ಮಿಕರು ಗುರುತು ಚೀಟಿ ಪಡೆದರೆ ಮಾತ್ರ ಕಲ್ಯಾಣ ಮಂಡಳಿಯ ಸೌಲಭ್ಯಗಳು ದೊರೆಯುವುದಿಲ್ಲ ಎಂದರು.
ಸರ್ಕಾರದ ನೀತಿಗಳು ಕಾರ್ಮಿಕರ ಪರವಾಗಬೇಕಾದರೆ ನಿರಂತರವಾಗಿ ಬದಲಾಗುತ್ತಿರುವ ಸಮಾಜವನ್ನು ಪತ್ರಿಕೆಗಳ ಅಧ್ಯಯನದಿಂದ ಕರಗತ ಮಾಡಿಕೊಂಡು ತಮ್ಮಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸೌಲಭ್ಯಗಳನ್ನು ಪಡೆಯಬೇಕೆಂದರು.
ಮುಖ್ಯ ಅತಿಥಿಗಳಾಗಿ ಕಾರ್ಮಿಕ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್, ಗ್ರಾಮ ಪಂಚಾಯಿತಿ ತಾಲೂಕು ಅಧ್ಯಕ್ಷ ಬಸವರಾಜು, ಮುನಿಸಿಪಲ್ ಕಾರ್ಮಿಕ ಮುಖಂಡ ಶಿವಶಂಕರ್, ಕಟ್ಟಡ ಕಾರ್ಮಿಕ ಸಂಘಟನೆಯ ತಾಲೂಕು ಸಂಚಾಲಕ ತಿಮ್ಮೇಗೌಡ, ಅಂಗನವಾಡಿ ನೌಕರರ ಸಂಘಟನೆಯ ತಾಲೂಕು ಕಾರ್ಯದರ್ಶಿ ಶೈಲಕುಮಾರಿ ಭಾಗವಹಿಸಿದ್ದರು.
ಅಧ್ಯಕ್ಷತೆಯನ್ನು ಸಿಐಟಿಯು ತಿಪಟೂರು ತಾಲೂಕು ಸಮಿತಿಯ ಅಧ್ಯಕ್ಷ ಅನುಸೂಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ನೋಂದಾಯಿತ ಕಾರ್ಮಿಕರಿಗೆ ಕಾರ್ಮಿಕರ ಗುರುತಚೀಟಿ ವಿತರಿಸಲಾಯಿತು. ಸಂಘಟನೆಯ ಮುಖಂಡ ಲಕ್ಷ್ಮಣ್ ಅವರು ಸಂಘಟನೆಯ ಹಾಡುಗಳನ್ನು ಹಾಡಿದರು. ಹೊಸ ತಾಲೂಕಿನ ನೂತನ ಸಂಘಟನಾ ಸಮಿತಿಯನ್ನು ರಚಿಸಲಾಯಿತು. ಸಂಚಾಲಕರಾಗಿ ತಿಮ್ಮೇಗೌಡ, ಸಹ ಸಂಚಾಲಕರಾಗಿ ಮಂಜುನಾಥ್ ಧನಂಜಯ, ಶಿವಣ್ಣ, ಸದಸ್ಯರಾಗಿ ಉಮೇಶ್, ರವೀಶ್, ಭಾಸ್ಕರ್, ಗುರುಸಿದ್ದಯ್ಯ, ರಾಘವೇಂದ್ರಚಾರ್, ಮಧುಸೂದನ್, ಬಿ.ಎಸ್. ಹೊನ್ನೇಗೌಡ, ಪ್ರಭುಸ್ವಾಮಿ, ಬಸವರಾಜು ಅವರನ್ನು ಸೇರಿದಂತೆ ನೂತನ ಮುಖಂಡರನ್ನು ಆಯ್ಕೆ ಮಾಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

