ವಿದ್ಯಾಥಿಗಳು ಸರ್ಕಾರದ ಸವಲತ್ತು ಸದ್ಬಳಕೆ ಮಾಡಿಕೊಳ್ಳಲಿ
ಕ.ಪ್ರ.ವಾರ್ತೆ ಮಧುಗಿರಿ ಡಿ. 21
ವಿದ್ಯಾಥಿಗಳು ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಗುಣ ಮಟ್ಟದ ಶಿಕ್ಷಣ ಕಲಿಯುವ ನಿಟ್ಟಿನಲ್ಲಿ ಸ್ವಾಭಿಮಾನದ ಬದುಕು ಸಾಗಿಸಲು ಮುಂದಾಗಬೇಕು ಎಂದು ಜಿ.ಪಂ.ಸದಸ್ಯೆ ಮಂಜುಳಾ ವೀರೇಂದ್ರ ಪ್ರಸಾದ್ ಕರೆ ನೀಡಿದರು.
ತಾಲೂಕಿನ ಬ್ಯಾಲ್ಯ ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಉಚಿತ ಸೈಕಲ್ ವಿತರಣಾ ಸಂಮಾರಂಭ ಉದ್ಘಾಟಿಸಿ ಮಾತನಾಡಿ, ಶಿಕ್ಷಕರು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ತಮ್ಮ ಪಾಲಿನ ಪಾಠ ಪ್ರವಚನಗಳನ್ನು ಕಲಿಸುವ ಜೊತೆಗೆ ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ವಿದ್ಯಾರ್ಥಿಗಳನ್ನು ತಯಾರು ಮಾಡುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಅದೇ ರೀತಿ ಪೋಷಕರು ಕೂಡ ಮಕ್ಕಳ ಕಲಿಕೆ ಬಗ್ಗೆ ಆಸಕ್ತಿ
ತೋರಿಸಬೇಕು. ಮಕ್ಕಳಿಗೆ ಆಸ್ತಿ ಮಾಡುವುದು ಬೇಡ, ಉತ್ತಮ ವಿದ್ಯೆ ಕಲಿಸುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿ ಪರಿವರ್ತಿಸಿ. ವಿದ್ಯೆ ಯಾರೂ ಕದಿಯಲಾರದ ಸಂಪತ್ತು. ಅಕ್ಷರಜ್ಞಾನ ಎಲ್ಲ ಕಾಲಕ್ಕೂ ಕೈ ಹಿಡಿದು ನಡೆಸುತ್ತದೆ. ಹಾಗಾಗಿ ಮಕ್ಕಳು ಸರ್ಕಾರದ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಕಷ್ಟಪಟ್ಟು ಓದಿ ಮುಂದೆ ಬರುವ ಮೂಲಕ ಹೆತ್ತವರಿಗೆ, ಗುರು ಹಿರಿಯರಿಗೆ ನಮ್ಮ ತಾಲೂಕು, ಜಿಲ್ಲೆ ಹಾಗೂ ರಾಜ್ಯಕ್ಕೆ ಉತ್ತಮ ಹೆಸರು ತಂದು ಕೊಡುವಂತೆ ಕಿವಿ ಮಾತು ಹೇಳಿದರು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ಸಿದ್ದಗಂಗಾಂಭಿಕೆ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳು ಪ್ರತಿಭಾವಂತರಿದ್ದು ಸರ್ಕಾರದ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಗುಣ ಮಟ್ಟದ ಶಿಕ್ಷಣ ಕಲಿಕೆಗೆ ಆದ್ಯತೆ ನೀಡಬೇಕು. ಶಿಕ್ಷಕರು-ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಗಮನ ಹರಿಸಬೇಕು ಎಂದರು.
ಉಪ ಪ್ರಾಂಶುಪಾಲ ಮಾರುತಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ 67 ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಕಾಮರಾಜು, ದೊಡ್ಡನಾಗಪ್ಪ ಮತ್ತು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಅಶ್ವತ್ಥ ಸ್ವಾಗತಿಸಿ, ಗೋವಿಂದರಾಜು ನಿರೂಪಿಸಿ ಸ್ವಾಮಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

