ತುಮಕೂರು

ವಿದ್ಯಾರ್ಥಿ ವೃಂದ ಗಣಿತದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ: ಪ್ರದೀಪ್

Published On :

ಕನ್ನಡಪ್ರಭ ವಾರ್ತೆ ತುಮಕೂರು ಡಿ.22
ವಿಜ್ಞಾನ, ತಂತ್ರಜ್ಞಾನ ವಿಷಯಗಳಿಗೆ ಸಂಬಂಧಿಸಿದ್ದು ಎಂಬುದು ತಪ್ಪು ಕಲ್ಪನೆ ಎಂದು ಸಿಐಟಿಯ ಗಣಿತ ವಿಭಾಗದ ಪ್ರಾಧ್ಯಾಪಕ ಡಾ.ಸಿ.ಆರ್. ಪ್ರದೀಪ್ ತಿಳಿಸಿದ್ದಾರೆ.
ನಗರದ ಎಸ್‌ಐಟಿ ಬಡಾವಣೆಯ ವಾಸವಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಅಂಗವಾಗಿ  ವಿಜ್ಞಾನಬಿಂದು, ವಾಸವಿ ಪದವಿಪೂರ್ವ ಕಾಲೇಜು, ಚಿನ್ಮಯಿ ಗ್ರಾಮೀಣ ಶಿಕ್ಷಣ ಮತ್ತು ಮಹಿಳಾ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಒಲಂಪಿಯಾಡ್-2013ರ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗಣಿತ ಎಲ್ಲಾ ಹಂತದಲ್ಲಿಯೂ ವಿದ್ಯಾರ್ಥಿಗಳಿಗೆ ಸಹಾಯಕ್ಕೆ ಬರುತ್ತದೆ ಎಂದರು.
ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಗಣಿತದ ವಿಷಯ ಮುಖ್ಯವಾಗಿರುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಭಾಗವಹಿಸುವುದು ಅತ್ಯಂತ ವಿರಳ. ಈ ಹಿನ್ನೆಲೆಯಲ್ಲಿ ಮೊದಲು ತುಮಕೂರಿನಿಂದ ಗಣಿತ ಒಲಂಪಿಯಾಡ್ ಮೂಲಕ ಆಸಕ್ತರನ್ನು ಕಲೆಹಾಕಿ ಅವರಿಗೆ ಗಣಿತದ ಬೇಸಿಕ್ ಕಲಿಸಿ ಗಣಿತ ವಿಷಯದಲ್ಲಿ ಪರಿಣಿತರನ್ನಾಗಿ ಮಾಡುವ ಉದ್ದೇಶದಿಂದ ಒಲಂಪಿಯಾಡ್ ಆರಂಭಿಸಲಾಗಿದೆ ಎಂದರು.
ವಿಜ್ಞಾನಬಿಂದು ಸಹಯೋಗದೊಂದಿಗೆ ಇಂದು ತುಮಕೂರು ಜಿಲ್ಲೆಯಾದ್ಯಂತ ಗಣಿತ ವಿಷಯದಲ್ಲಿ ಆಸಕ್ತರನ್ನು ಕಲೆಹಾಕಿ ಅವರಿಗೆ ಗಣಿತ ಭೋಧನೆಯ ಬಗ್ಗೆ ತರಬೇತಿ ನೀಡಲಾಗುತ್ತಿದೆ ಎಂದು ಡಾ.ಪ್ರದೀಪ್ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ವಾಸವಿ ವಿದ್ಯಾಪೀಠದ ಅಧ್ಯಕ್ಷ ಸಿ.ಎ. ಸೋಮೇಶ್ವರಗುಪ್ತ ಮಾತನಾಡಿ, ಇದುವರೆಗೂ ಜಿಲ್ಲೆಗೆ ಸೀಮಿತವಾಗಿದ್ದ ವಿಜ್ಞಾನ ಒಲಂಪಿಯಾಡ್ ಸ್ಪರ್ಧೆಯನ್ನು ಮುಂದಿನ ವರ್ಷದಿಂದ ರಾಜ್ಯಮಟ್ಟಕ್ಕೆ ವಿಸ್ತರಿಸಲಾಗುವುದು. ರಾಜ್ಯ ಮಟ್ಟದಲ್ಲಿ ನಡೆಯುವ ಈ ಸ್ಪರ್ಧೆಯಲ್ಲಿ ಮೊದಲ ಮೂರು ಸ್ಥಾನಗಳಿಸುವ ವಿದ್ಯಾರ್ಥಿಗಳಿಗೆ ವಾಸವಿ ವಿದ್ಯಾಪೀಠದ ವತಿಯಿಂದ 25 ಸಾವಿರ ನಗದು ಬಹುಮಾನದ ಜೊತೆಗೆ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ನೀಡಿ ಗೌರವಿಸಲಾಗುವುದು ಎಂದು ಭರವಸೆ ನೀಡಿದರು.
ವಿಜ್ಞಾನಬಿಂದು ಸಂಸ್ಥೆ ಕಾರ್ಯದರ್ಶಿ ರವಿಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ವಾಸವಿ ವಿದ್ಯಾಪೀಠದ ಕಾರ್ಯದರ್ಶಿ ಜಿ.ಕೃಷ್ಣಮೂರ್ತಿ, ಜಿ. ಹನುಮಂತಯ್ಯ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.