ಲೋಕಸಭಾ ಚುನಾವಣೆಕಾಂಗ್ರೆಸ್ ಪಕ್ಷ ಗೆಲ್ಲಿಸಿ
ತುಮಕೂರು: ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಸುಭದ್ರ ಆಡಳಿತ ನೀಡುವ ಮೂಲಕ ದೇಶದ ಅರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸುವಂತೆ ತುಮಕೂರು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಆರ್. ರಾಮಸ್ವಾಮಿಗೌಡ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ನಗರದ ಶೆಟ್ಟಿಹಳ್ಳಿ ಮುಖ್ಯರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ತುಮಕೂರು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ನ ಬೂತ್ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮಪಂಚಾಯಿತಿಗಳ ಸದಸ್ಯರು ಹಾಗೂ ಕಾರ್ಯಕಾರಿಣಿ ಮಂಡಳಿಯ ಸದಸ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಭಾರತದ ರಾಜಕೀಯ ಇತಿಹಾಸವನ್ನು ಗಮನಿಸಿದರೆ ಸುಭದ್ರ ಸರಕಾರ ಕೇವಲ ಕಾಂಗ್ರೆಸ್ ಪಕ್ಷದಿಂದ ಮಾತ್ರ ಎಂದರು.
ಈ ಹಿಂದೆ ಬೇರೆ ಬೇರೆ ಪಕ್ಷಗಳಿಂದ ಪ್ರಧಾನಿಗಳಾಗಿದ್ದರೂ ಆರು ತಿಂಗಳು, ವರ್ಷ, ಒಂದೂವರೆ ವರ್ಷದಲ್ಲಿ ಅಂತರಿಕ ಕಿತ್ತಾಟದಿಂದ ಪ್ರಧಾನಿ ಹುದ್ದೆಗಳನ್ನು ಕಳೆದುಕೊಂಡಿದ್ದಾರೆ. ಎಚ್.ಡಿ. ದೇವೇಗೌಡ, ಐ.ಕೆ.ಗುಜ್ರಾಲ್, ವಿ.ಪಿ.ಸಿಂಗ್ ಐದು ವರ್ಷ ಪೂರೈಸಲು ಸಾಧ್ಯವಾಗಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಕಳೆದ 10 ವರ್ಷಗಳಿಂದ ಸುಭದ್ರ ಸರಕಾರ ನೀಡಿ ಜನತೆಗೆ ಉಪಚುನಾವಣೆಗಳಿಂದ ಹೊರೆಯಾಗದಂತೆ ಮಾಡಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಾಕಷ್ಟು ಉತ್ತಮವಾಗಿ ಕೆಲಸ ಮಾಡುತ್ತಾ ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ಬಲಪಡಿಸಲು ಮುಂದಾಗಿದ್ದಾರೆ. ಅವರಿಗೆ ಬೆಂಬಲವಾಗಿ ಮತ್ತೊಮ್ಮೆ ನಾವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕೆಂದು ರಾಮಸ್ವಾಮಿಗೌಡ ನುಡಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಚ್.ಸಿ. ಹನುಮಂತಯ್ಯ ಮಾತನಾಡಿದರು. ಕಾರ್ಯಕಾರಿಣಿ ಸಭೆಯಲ್ಲಿ ತುಮಕೂರು ತಾಲೂಕು ಬ್ಲಾಕ್ ಕಾಂಗ್ರೆಸ್ನ ಉಪಾಧ್ಯಕ್ಷ ಚಿಕ್ಕಣ್ಣ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಹನುಮಂತರಾಯಪ್ಪ, ವಿವಿಧ ಗ್ರಾಮಪಂಚಾಯಿತಿಗಳ ಅಧ್ಯಕ್ಷ- ಉಪಾಧ್ಯಕ್ಷರು, ಬೂತ್ ಅಧ್ಯಕ್ಷರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

