ತುಮಕೂರು

ಅಟಲ್‌ರಿಂದ ಭಾರತ ಜಾಗತಿಕ ಮಟ್ಟದಲ್ಲಿ ಪರಿಚಿತ

Published On :

ಕುಣಿಗಲ್: ಮಾಜಿ ಪ್ರದಾನಿ ಅಟಲ್ ಬಿಹಾರಿ ವಾಜಪೇಯಿಯವರು ರಾಷ್ಟ್ರದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ, ಅವರ ಅಧಿಕಾರಾವಧಿಯಲ್ಲಿ ಕೈಗೊಂಡ ಹಲವು ಪರಿಣಾಮಕಾರಿ ಕಾರ್ಯಕ್ರಮಗಳಿಂದ ಇಂದು ಭಾರತವು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಿದೆ ಎಂದು ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ್ ತಿಳಿಸಿದರು.
ಮಂಗಳವಾರ, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಿಜೆಪಿ ತಾಲೂಕು ಘಟಕ ಮತ್ತು ನಮೋ ಬ್ರಿಗೇಡ್ ಕುಣಿಗಲ್ ಘಟಕದ ಸಂಯುಕ್ತಾಶ್ರಯದಲ್ಲಿ ವಾಜಪೇಯಿಯವರ 89ನೇ ಹುಟ್ಟುಹಬ್ಬಾಚರಣೆ ಅಂಗವಾಗಿ ರಕ್ತದಾನ ಶಿಬಿರ, ಪೌರಕಾರ್ಮಿಕರಿಗೆ ಸಮವಸ್ತ್ರ ಮತ್ತು ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಮುಸ್ಲಿಂ ವಿರೋಧಿ ಎಂದು ಕೆಲ ಪಕ್ಷಗಳು ಬೊಬ್ಬೆ ಹೊಡೆಯುತ್ತಿದ್ದ ಸಮಯದಲ್ಲಿ, ದೇಶಕಂಡ ಖ್ಯಾತವಿಜ್ಞಾನಿ ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿಯನ್ನಾಗಿ ಆಯ್ಕೆಮಾಡುವ ಮೂಲಕ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದರು. ಎಲ್ಲಾ ವರ್ಗದ ಜನತೆಯ ಸಮಗ್ರ ಅಭಿವೃದ್ಧಿಗಾಗಿ ಹಲವು ಉತ್ತಮ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ, ಜಾಗತಿಕ ಮಟ್ಟದಲ್ಲಿ ಭಾರತವನ್ನು ಎಲ್ಲರೂ ಗೌರವಿಸುವಂತ ಮಹತ್ಕಾರ್ಯಗಳನ್ನು ಮಾಡಿ, ಪಕ್ಷ, ಜಾತಿ, ಮತಗಳನ್ನು ಮೀರಿ ಬೆಳೆದ ಮಹಾನ್ ನಾಯಕ ಆದರು ಎಂದು ಬಣ್ಣಿಸಿದರು. ಜಿಲ್ಲಾ ಉಪಾಧ್ಯಕ್ಷ ಕೆ.ಎಂ. ತಿಮ್ಮಪ್ಪ ಮಾತನಾಡಿ ಪ್ರಮುಖ ರಸ್ತೆಗಳು ಮತ್ತು ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಉತ್ತಮ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಕೀರ್ತಿ ವಾಜಪೇಯಿಯವರದಾಗಿದೆ ಎಂದರು.
ಕಾರ್ಯಕ್ರಮದ ಮುನ್ನ ರಾಷ್ಟ್ರಕವಿ ಜಿ.ಎಸ್.ಎಸ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದ್ದು, ನಂತರ ಪೌರಕಾರ್ಮಿಕರಿಗೆ ಉಚಿತ ಸಮವಸ್ತ್ರ ವಿತರಿಸಿದ್ದು, ರಾಷ್ಟ್ರೋತ್ತಾನ ರಕ್ತನಿಧಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ರಕ್ತದಾನ ಶಿಬಿರದಲ್ಲಿ  50 ಯುನಿಟ್ ರಕ್ತ ಸಂಗ್ರಹಿಸಲಾಯಿತು. ಜಿಲ್ಲಾ ಪ್ರದಾನ ಕಾರ್ಯದರ್ಶಿ ಎಚ್.ಎನ್.ನಟರಾಜ್, ಪುರಸಭೆ ಸದಸ್ಯ ರಾಮು, ಪ್ರಮುಖರಾದ ನಡೇಮಾವಿನಪುರ ರಂಗಸ್ವಾಮಿ,ಬಲರಾಮ, ಸುರೇಶ್, ಸಂತೋಷ್, ರಂಗನಾಥ, ಮಂಜುನಾಥ, ರೇಣುಕಪ್ಪ, ಶ್ರೀನಿವಾಸ, ಸತೀಶ, ಮಿಲ್ ಸೀನಣ್ಣ, ಮಹೇಶ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.