ಅಡುಗೆ ಸಹಾಯಕನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಪಾವಗಡ: ಕ್ಷುಲ್ಲಕ ಕಾರಣದ ಹಿನ್ನಲೆಯಲ್ಲಿ ಅಡುಗೆ ಸಹಾಯಕನ ಮೇಲೆ ಏಕಾಏಕಿ ಹಲ್ಲೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸುಬ್ರಹ್ಮಣ್ಯಂ ವಿರುದ್ಧ ತಾಲೂಕಿನ ವಿವಿಧ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ ಪ್ರಸಂಗ ಬುಧವಾರ ಪಟ್ಟಣದ ಪ್ರವಾಸಿ ಮಂದಿರದ ಅವರಣದಲ್ಲಿ ನಡೆಯಿತು.
ಪಟ್ಟಣದ ಎಸ್ಸಿ, ಎಸ್ಟಿ ನಿಲಯ ಪಾಲಕರೊಬ್ಬರ ಸಲಹೆ ಮೇರೆಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಹಾಸ್ಟೆಲ್ಗಳ ಪರಿಶೀಲನೆಗಾಗಿ ಬುಧವಾರ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಬಾಲಸುಬ್ರಹ್ಮಣ್ಯಂ ಪಾವಗಡಕ್ಕೆ ಆಗಮಿಸಿ ಪೆಟ್ರೋಲ್ ಬಂಕ್ ಬಳಿ ಇರುವ ಎಸ್ಸಿ, ಎಸ್ಟಿ ಪಿಯುಸಿ ವಿದ್ಯಾರ್ಥಿ ನಿಲಯ ಪತಂಜಲಿ ನಗರದಲ್ಲಿರುವ ಪಿಯುಸಿ ಮಹಿಳಾ ವಿದ್ಯಾರ್ಥಿ ನಿಲಯ ಹಾಗೂ ವೆಂಕಟೇಶ್ವರ ನರ್ಸಿಂಗ್ ಹೋಂ ಪಕ್ಕದಲ್ಲಿರುವ ಪಿಯುಸಿ ಹಾಸ್ಟೆಲ್ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಪಳವಳ್ಳಿ ಎಸ್ಸಿ, ಎಸ್ಟಿ ಪ್ರೌಢ ಶಾಲೆಯ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಹಾಸ್ಟೆಲ್ ಪರಿಶೀಲಿಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವಿವರ ಪಡೆದ ನಂತರ ಅಡುಗೆ ಸಾಮಗ್ರಿಗಳಿರುವ ಸ್ಟೋರ್ ರೂಮ್ ಕೀ ಹಾಗೂ ವಿದ್ಯಾರ್ಥಿಗಳ ಹಾಜರಾತಿ ಪುಸ್ತಕ ತರುವಂತೆ ಅಡಿಗೆ ಸಹಾಯಕ ನಾರಾಯಣ ಎಂಬುವರನ್ನು ಕೇಳಿದ್ದಾರೆ.
ಇದಕ್ಕೆ ಪ್ರತಿಯಾಗಿ ಉತ್ತರಿಸಿದ ಅಡುಗೆ ಸಹಾಯಕ ನಾರಾಯಣ ತಮ್ಮ ಸಂಬಂಧಿಕರ ನಿಧನದ ಹಿನ್ನಲೆಯಲ್ಲಿ ಸಮಾಜ ಕಲ್ಯಾಣಾಧಿಕಾರಿ ಚೌಧರಿ ಎಂಬುವರಿಗೆ ರಜೆ ಚೀಟಿ ನೀಡಿ ತೆರಳಿದ್ದಾರೆ. ಈ ಹಿನ್ನಲೆಯಲ್ಲಿ ಹಾಜರಾತಿ ಸೇರಿದಂತೆ ಸ್ಟೋರ್ ರೂಂ ಬೀಗ ಹಾಗೂ ವಿದ್ಯಾರ್ಥಿ ನಿಲಯಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳು ಅವರ ಬಳಿಯೆ ಇವೆ ಎಂದು ಅಡಿಗೆ ಸಹಾಯಕ ತಿಳಿಸಿದಾಗ ಕೂಡಲೇ ಆಕ್ರೋಶ ಭರಿತರಾದ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸುಬ್ರಹ್ಮಣ್ಯಂ ಅಡಿಗೆ ಸಹಾಯಕ ನಾರಾಯಣ ಎಂಬುವರನ್ನು ಕೆನ್ನಗಳಿಗೆ ಬಲವಾಗಿ ಹೊಡೆದು ಆತನ ದೇಹದ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯ ಸುದ್ದಿ ಹರಡುತ್ತಿದದಂತೆ ವಿವಿಧ ದಲಿತ ಸಂಘಟನೆ ಪದಾಧಿಕಾರಿಗಳು ಪಳವಳ್ಳಿ ಪ್ರೌಢ ಶಾಲಾ ಎಸ್ಸಿ, ಎಸ್ಟಿ ಹಾಸ್ಟೆಲ್ಗೆ ಭೇಟಿ ನೀಡಿ ಪರಿಶೀಲಿಸಿ ಘಟನೆ ಬಗ್ಗೆ ಖಂಡಿಸಿದ್ದಾರೆ.
ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಯ ದೌರ್ಜನ್ಯ ಹಾಗೂ ಹಲ್ಲೆ ಖಂಡಿಸಿ ನಾರಾಯಣ ಪಾವಗಡ ಪೊಲೀಸ್ ಠಾಣೆಗೆ ದೂರು ನೀಡಿ ನ್ಯಾಯ ಕಲ್ಪಿಸಲು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

