ತುಮಕೂರು

ಸುದ್ದಿ ಸಂಕ್ಷೇಪ

Published On :

ಮರಳು ಸಾಗಾಣಿಕೆ: 3 ಲಾರಿ ವಶ
ತುಮಕೂರು: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಮೂರು ಲಾರಿಯನ್ನು ತುಮಕೂರು ಸಮೀಪದ ಓಬಳಾಪುರ ಗ್ರಾಮದಲ್ಲಿ ವಶಪಡಿಸಿಕೊಳ್ಳಲಾಗಿದೆ. ಕೋರ ಹೋಬಳಿ ಕಂದಾಯ ಇಲಾಖೆ ತನಿಖಾಧಿಕಾರಿ ಚಂದ್ರಯ್ಯ ಅವರು ನೀಡಿದ ದೂರಿನ ಮೇರೆಗೆ ತುಮಕೂರು ತಾಲೂಕು ತಹಸೀಲ್ದಾರ್ ಆದೇಶದಂತೆ ಮರಳು ತುಂಬಿದ್ದ ಲಾರಿಗಳನ್ನು ನಿಲ್ಲಿಸಿ ದಾಖಲಾತಿ ಮತ್ತು ಪರವಾನಿಗೆ ನೀಡಲು ಸೂಚಿಸಿದರು. ಪರವಾನಗಿ ಇರದೇ ಇದ್ದುದ್ದರಿಂದ ವಶಕ್ಕೆ ತೆಗೆದುಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.
ಇಂದು ಹೆಬ್ಬೂರಿನಲ್ಲಿ ರೈತರ ಪ್ರತಿಭಟನೆ
ಹೆಬ್ಬೂರು: ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ಡಿ. 26 ರಂದು ಬೆಳಗ್ಗೆ 11 ಗಂಟೆಗೆ ರೈತರ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಏರ್ಪಡಿಸಿರುವ ಈ ಪ್ರತಿಭಟನೆಯಲ್ಲಿ ರೈತ ಮುಖಂಡ ಹಾಗೂ ಶಾಸಕ ಕೆ.ಎಸ್. ಪುಟ್ಟಣ್ಣಯ್ಯ, ಕರ್ನಾಟಕ ರಾಜ್ಯ ರೈತ ಸಂಘದ ಸೋಮಗುಡ್ಡದ ರಂಗಸ್ವಾಮಿ, ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಕೆ.ಟಿ. ಗಂಗಾಧರ್, ಮಹಿಳಾ  ಅಧ್ಯಕ್ಷೆ ನಂದಿನಿ ಜಯರಾಂ, ಪ್ರಧಾನ ಕಾರ್ಯದರ್ಶಿ ನಾಗೇಂದ್ರ, ರಾಜ್ಯ ಉಪಾಧ್ಯಕ್ಷ  ಎ. ಗೋವಿಂದರಾಜು ಭಾಗವಹಿಸಲಿದ್ದಾರೆ. ರೈತರು, ವಿದ್ಯಾರ್ಥಿಗಳು, ಯುವಜನರು ಸ್ತ್ರೀಶಕ್ತಿ ಸಂಘಗಳು ಮತ್ತು ಜನಪರ ಸಂಘಟನೆಗಳು ಭಾಗವಹಿಸಬೇಕೆಂದು ಜಿಲ್ಲಾಧ್ಯಕ್ಷ ಗೋವಿಂದರಾಜು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.