ಜಿ.ಎಸ್.ಶಿವರುದ್ರಪ್ಪ ಮಾನವತಾವಾದಿ
ಕ.ಪ್ರ.ವಾರ್ತೆ ರಾಮನಗರ ಡಿ.26
ಜೋಗರದೊಡ್ಡಿಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಅಗಲಿದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಜೆ ಪ್ರಭು ಕರಕುಶಲ ತರಬೇತಿ ಸಂಸ್ಥೆಯ ನಿರ್ದೇಶಕ ಎಂ.ವೆಂಕಟೇಶ ಶೇಷಾದ್ರಿ ಮಾತನಾಡಿ, ದೇಶ ಕಂಡ ಮಹಾ ಚೇತನ, ಮಾನವತಾವಾದಿ, ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕವು ಬಡವಾಗಿದೆ ಎಂದರು. ಡಾ.ಜಿಎಸ್ಎಸ್ ಅವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪೂರ್ವವಾದ ಕೊಡುಗೆ ನೀಡಿದ್ದಾರೆ. ಅವರು ಯಾವುದೇ ವಿವಾದಕ್ಕೆ ಗುರಿಯಾಗದೆ ನಿಸ್ಪೃಹ ಮತ್ತು ಅರ್ಥಪೂರ್ಣ ಜೀವನ ನಡೆಸಿದರು. ಅವರು ರಚಿಸಿರುವ ಭಾವಪೂರ್ವಕ ಗೀತೆಗಳನ್ನು ಎಷ್ಟು ಬಾರಿ ಕೇಳಿದರೂ ಮತ್ತೆ ಮತ್ತೆ ಕೇಳಬೇಕೆನಿಸುತ್ತದೆ ಎಂದರು. ಈ ವೇಳೆ ಸಂಸ್ಥೆಯ ಅಧ್ಯಾಪಕ ಜಿ.ಎಸ್.ಸಿದ್ದಪ್ಪ, ಉಮೇಶ್ ಗುಡಿಗಾರ್, ಚಂದ್ರಶೇಖರ್, ನರೇಶ್ ಕುಮಾರ್, ದೇವರಾಜ್, ಶಿವಕುಮಾರ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

