ಪಿಯು ಕಾಲೇಜಿನಲ್ಲಿ ಪ್ರಯೋಗಾಲಯ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ
ಕ.ಪ್ರ.ವಾರ್ತೆ ಸೂಲಿಬೆಲೆ ಡಿ.26
ಇಲ್ಲಿನ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದಾನಿಗಳ ಸಹಕಾರದಿಂದ ನಿರ್ಮಾಣವಾಗಲಿರುವ ಎರಡು ಕೊಠಡಿಗಳಿಗೆ ಶಾಸಕ ಎನ್. ನಾಗರಾಜ್ ಗುರುವಾರ ಶಂಕುಸ್ಥಾಪನೆ ನಡೆಸಿದರು.
ನಂತರ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಉನ್ನತ ವಿದ್ಯೆಗಾಗಿ ದೂರದ ಪ್ರದೇಶಗಳಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ನಾನು ಶಾಸಕನಾಗಿದ್ದ ಅವಧಿಯಲ್ಲಿ ಸೂಲಿಬೆಲೆಗೆ ಪಿಯು ಕಾಲೇಜು ಮಂಜೂರು ಮಾಡಿಸಿದ್ದೆ.
ಈಗ ಕಾಲೇಜಿಗೆ ಗ್ರಾಮೀಣ ಭಾಗದಿಂದಲೇ ಹೆಚ್ಚಾಗಿ ಮಕ್ಕಳು ಬರುತ್ತಿದ್ದು, ಉನ್ನತ ವಿದ್ಯೆಗೆ ಸಿಕ್ಕ ಈ ಅವಕಾಶವನ್ನು ಹೆಣ್ಣುಮಕ್ಕಳು ಹೆಚ್ಚಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಕಾಲೇಜಿಗೆ ಅಗತ್ಯವಾಗಿರುವ ಮೂಲಭೂತ ಸೌಲಭ್ಯಗಳನ್ನು ದಾನಿಗಳು ಹಾಗೂ ಇಲಾಖೆ ನೆರವಿನಿಂದ ಕಲ್ಪಿಸಲಾಗುವುದು ಎಂದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಕುಳಿತುಕೊಳ್ಳಲು ಅಗತ್ಯವಾಗಿರುವ ಡೆಸ್ಕುಗಳನ್ನು ವಿತರಣೆ ಮಾಡಲಾಯಿತು.
ಎರಡು ಕೊಠಡಿಗಳ ನಿರ್ಮಾಣಕರ್ತರಾದ ಜೆಆರ್ಎಸ್ ಹೌಸಿಂಗ್ ಡೆವಲಪ್ಮೆಂಟ್ ಮಾಲೀಕ ಜಗದೀಶ್ ರೆಡ್ಡಿ, ಸುಮಧುರ ಹೌಸಿಂಗ್ ಕನ್ಸ್ಟ್ರಕ್ಷನ್ ಮಾಲೀಕ ಮಧುಸೂದನ್ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪ್ರಸಾದ್, ಸ್ವಾತಂತ್ರ್ಯ ಹೋರಾಟಗಾರ ಸೂ.ರಂ ರಾಮಯ್ಯ ಮಾತನಾಡಿದರು.
ಕೆಪಿಸಿಸಿ ಮುಖಂಡ ಕೆಂಪಣ್ಣ, ಮುಖಂಡ ಹೇಮಂತ್ಕುಮಾರ್, ರಘವೀರ್, ಮರುವೆ ಕೃಷ್ಣಪ್ಪ, ಪುಟ್ಟಸ್ವಾಮಪ್ಪ, ತಾಪಂ ಸದಸ್ಯ ಗೋಪಾಲಪ್ಪ, ಪ್ರಾಂಶುಪಾಲ ಚಂದ್ರಶೇಖರ್, ಗ್ರಾಪಂ ಸದಸ್ಯರು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮದ ಮುಖಂಡರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

