ವಿಶ್ವ ಏಡ್ಸ್ ದಿನಾಚರಣೆ, ವಿಶೇಷ ಪಾಲನಾ ಯೋಜನೆ ಕಾರ್ಯಕ್ರಮ
ಕ.ಪ್ರ.ವಾರ್ತೆ ತುಮಕೂರು ಡಿ.26
ಯಾವುದೇ ರೋಗನಿರೋಧಕ ಲಸಿಕೆ ಇರದ ಏಡ್ಸ್ ಕಾಯಿಲೆ ಇತ್ತೀಚಿನ ದಿನಗಳಲ್ಲಿ ನಾನಾ ಕಾರಣಗಳಿಂದಾಗಿ ಮಕ್ಕಳು ಹಾಗೂ ದೊಡ್ಡವರಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅನೇಕ ಮಕ್ಕಳು ತಮ್ಮ ತಂದೆ ತಾಯಿಯರನ್ನು ಕಳೆದುಕೊಂಡು ಅನಾಥರಾಗಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಅಭಿಪ್ರಾಯಪಟ್ಟರು.
ಅವರು ತುರುವೇಕೆರೆಯ ವಿವೇಕಾನಂದ ಪ.ಪೂ. ಕಾಲೇಜು ಆವರಣದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಹಾಗೂ ವಿಶೇಷ ಪಾಲನಾ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಏಡ್ಸ್ ಸೋಂಕಿತ, ಬಾಧಿತ ಮಕ್ಕಳಿಗೆ ವಿಶೇಷ ಪಾಲನಾ ಯೋಜನೆ ಎಂಬ ಕಾರ್ಯಕ್ರಮವಿದ್ದು, ಇದರ ಅಡಿಯಲ್ಲಿ ಮಕ್ಕಳಿಗೆ ಮಾಸಿಕ 650 ರು., ಹಾಗೂ 750 ರು.ಗಳವರೆಗೆ ಆರ್ಥಿಕ ಸೌಲಭ್ಯವಿರುತ್ತದೆಂದು ತಿಳಿಸಿದರು. ಮಕ್ಕಳು ಶಾಲೆಗೆ ಹೋಗುತ್ತಿರುವಲ್ಲಿ ವಾರ್ಷಿಕ ಒಂದು ಬಾರಿ ಶಿಕ್ಷಣಕ್ಕಾಗಿ 500 ರು.ಗಳನ್ನು ನೀಡಲು ಅವಕಾಶವಿದೆಯೆಂದು ತಿಳಿಸಿದರು. ಐ.ಸಿ.ಟಿ.ಸಿ ಸಮಾಲೋಚಕ ತಿಮ್ಮೇಗೌಡ ಮಾತನಾಡಿ ಮಾರಣಾಂತಿಕ ಕಾಯಿಲೆಯನ್ನು ದೂರವಿಡಲು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ವಿವರಗಳನ್ನು ನೀಡಿದರು. ಈ ಕಾಯಿಲೆಯು ಹೆಚ್ಚು ವೇಗದಲ್ಲಿ ಹರಡುತ್ತಿದ್ದು, ಈ ಬಗ್ಗೆ ಯುವ ಪೀಳಿಗೆ ಎಚ್ಚರವಹಿಸಬೇಕಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

