ದೇಶಪ್ರೇಮ ಬೋಧಿಸುವ ಶಿಕ್ಷಣ ವ್ಯವಸ್ಥೆ ಅಗತ್ಯ
ಕುಣಿಗಲ್: ಉದ್ಯೋಗಾಧಾರಿತ ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿಲ್ಲ, ಪ್ರಸ್ತುತ ದೇಶಪ್ರೇಮ, ಸಾಮಾಜಿಕ ಕಳಕಳಿಯ ತತ್ವ, ಸಿದ್ಧಾಂತಗಳನ್ನು ಪರಿಣಾಮಕಾರಿಯಾಗಿ ಬೋಧಿಸುವಂಥ ಶಿಕ್ಷಣ ವ್ಯವಸ್ಥೆ ಅತ್ಯವಶ್ಯಕವಾಗಿದೆ ಎಂದು ಗೋರಕ್ಷಾ ಅಭಿಯಾನದ ಪ್ರಮುಖ, ಸಮಾಜಸೇವಕ ಮಹೇಂದ್ರ ಮನ್ನೋಟ್ ಅಭಿಪ್ರಾಯ ಪಟ್ಟರು.
ಪಟ್ಟಣದ ಮಹಾತ್ಮಗಾಂಧಿ ಪ.ಪೂ.ಕಾಲೇಜಿನ ಪ್ರೌಡಶಾಲೆ ವಿದ್ಯಾರ್ಥಿಗಳಿಗೆ, ಮಹೇಂದ್ರ ಮನ್ನೋಟ್ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಳ್ಳಲಾದ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಶೈಕ್ಷಣಿಕ ಪಠ್ಯ ಕ್ರಮಗಳಲ್ಲಿ ದೇಶಪ್ರೇಮ, ಸಾಮಾಜಿಕ ಕಳಕಳಿಯ ಉತ್ತಮ ಧ್ಯೋಯೋದ್ದೇಶಗಳನ್ನು ಹೊಂದಿನ ವಿಷಯ ಅಳವಡಿಕೆಯ ಕೊರತೆಯಿಂದಾಗಿ ಹಲವು ಗಂಭೀರ ಸ್ವರೂಪದ ಸಮಸ್ಯೆಗಳು ಎದುರಾಗುತ್ತಿವೆ. ಬಹುತೇಕರು ಉತ್ತಮ ವಿದ್ಯಾರ್ಥಿಗಳಾಗುತ್ತಿದ್ದಾರೆ. ಆದರೆ, ಉತ್ತಮ ದೇಶಸೇವಕನಾಗುತ್ತಿಲ್ಲ ಹಾಗೂ ಜವಾಬ್ದಾರಿಯುತ ಪ್ರಜೆಯಾಗುತ್ತಿಲ್ಲ ಎಂದರು.
ತಾಲೂಕು ಕಸಾಪ ಅಧ್ಯಕ್ಷ ದಿನೇಶ್ಕುಮಾರ್, ಗ್ರಾಮಾಂತರ ಪ್ರದೇಶದ ಶೈಕ್ಷಣಿಕ ಅಭಿವೃದ್ಧಿ ಕಾರ್ಯ ಕೇವಲ ಸರ್ಕಾರದಿಂದಲೇ ಮಾತ್ರ ಸಾಧ್ಯವಿಲ್ಲ. ಸರ್ಕಾರದ ಜೊತೆಯಲ್ಲಿ ಉದ್ಯಮಿಗಳೂ ತಮ್ಮ ಕೈಲಾದ ನೆರವನ್ನು ನೀಡಿದಾಗ, ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗುತ್ತದೆ. ಮಹೇಂದ್ರ ಮನ್ನೋಟ್ ಅವರು ಈವರೆಗೂ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿವಿಧ ಶಾಲೆಗಳಲ್ಲಿ ಮೂರುವರೆ ಲಕ್ಷ ನೋಟ್ ಪುಸ್ತಕ ಉಚಿತವಾಗಿ ನೀಡಿದ್ದು, ಕೆಲಶಾಲೆಗಳಿಗೆ ಅಗತ್ಯತೆಗೆ ತಕ್ಕಂತೆ ನೆರವು ನೀಡುವ ಮೂಲಕ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಸೇವೆಗೆ ಶ್ರಮಿಸುತ್ತಿದ್ದಾರೆ ಎಂದರು. ಶಿಕ್ಷಕರಾದ ಮೀನಾಂಬಿಕೆ, ಅಬ್ದುಲ್ ಅಜೀಜ್, ಅಭಿಮಾನಿ ಬಳಗದ ಮಂಜುನಾಥ, ಶ್ರೀನಿವಾಸ್, ರಂಗನಾಥ, ಮಹೇಶ್ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

