ತುಮಕೂರು

ಬ್ರಾಹ್ಮಣ ಸಭಾ ಶ್ರದ್ಧಾಂಜಲಿ

Published On :

ತುಮಕೂರು: ತುಮಕೂರಿನ ಶ್ರೀ ಶಂಕರಮಠದಲ್ಲಿ ನಡೆದ ಜಿಲ್ಲಾ ಬ್ರಾಹ್ಮಣ ಸಭಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರಕವಿ  ಜಿ.ಎಸ್. ಶಿವರುದ್ರಪ್ಪನವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಲಾಯಿತು.
ದಿವಂಗತರ ಗೌರವಾರ್ಥ ಎರಡು ನಿಮಿಷ ಮೌನ ಆಚರಿಸಲಾಯಿತು. ಮೃತರ ಕುಟುಂಬಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಕೋರಲಾಯಿತು.
ಜಿಲ್ಲಾ ಬ್ರಾಹ್ಮಣ ಸಭಾದ ಅಧ್ಯಕ್ಷ ಸಿ.ವಿ. ಶ್ರೀನಿವಾಸಮೂರ್ತಿ, ಪ್ರಧಾನ ಕಾರ್ಯದರ್ಶಿ ಎಚ್.ಎಸ್. ರಾಘವೇಂದ್ರ, ವಿಪ್ರ ಸಮಾಜದ ಮುಖಂಡರಾದ ಕೈಗಾರಿಕೋದ್ಯಮಿ ಎಚ್.ಜಿ. ಚಂದ್ರಶೇಖರ್, ನಗರಸಭಾ ಸದಸ್ಯ ಎನ್.ಆರ್. ನಾಗರಾಜರಾವ್, ಆಡಿಟರ್ ಕೆ. ನರಸಿಂಹಮೂರ್ತಿ, ಶ್ರೀ ಶಂಕರ ಸೇವಾ ಸಮಿತಿ ಕಾರ್ಯದರ್ಶಿ ವೆಂಕಟನಾರಾಯಣ, ಜಿಲ್ಲಾ ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಮದರ್ ಇಂಡಿಯಾ ಸತ್ಯನಾರಾಯಣ, ಕಾರ್ಯದರ್ಶಿ ಕೆ. ಹಿರಿಯಣ್ಣ, ಯೋಗತಜ್ಞ ಎಂ.ಕೆ. ನಾಗರಾಜರಾವ್ ಮತ್ತಿತರ ಗಣ್ಯರು ಸಂತಾಪ ಸೂಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.