ತುಮಕೂರು

ವಿದ್ಯಾರ್ಥಿ ನಿಲಯಕ್ಕೆ ಜಿಪಂ ಸದಸ್ಯರ ಭೇಟಿ

Published On :

ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿರುವ ಹಿಂದುಳಿದ ವರ್ಗಗಳ  ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೆಟ್ಟೀಕೆರೆ ಜಿಲ್ಲಾ ಪಂಚಾಯ್ತಿ ಸದಸ್ಯ ಎಚ್.ಬಿ.ಪಂಚಾಕ್ಷರಿ ಭೇಟಿ ನೀಡಿ  ನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಿದರು.
ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳ  ಸಂಖ್ಯೆ ಹಾಗೂ ಪ್ರತಿನಿತ್ಯ ಹಾಜರಾತಿ ಬಗ್ಗೆ ಪರೀಶೀಲನೆ ನಡೆಸಿದ ಅವರು ನಿಲಯದಲ್ಲಿ ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಇತ್ತೀಚೆಗೆ ತಾಲೂಕಿನಲ್ಲಿ ಡೆಂಘೀನಂತಹ ಮಾರಕ ರೋಗಗಳು ಹರಡುತ್ತಿರುವ ಹಿನ್ನಲೆಯಲ್ಲಿ ಕುಡಿಯುವ ನೀರು, ನೈರ್ಮಲ್ಯ ನಿರ್ವಹಣೆ  ಬಗ್ಗೆಹೆಚ್ಚಿನ ಕಾಳಜಿ ವಹಿಸಿ ಎಂದು ತಾಕೀತು ಮಾಡಿದರು.
ರಜಾ ದಿನಗಳಲ್ಲಿ ಹಾಜರಾತಿಯನ್ನು ಪ್ರಾಮಾಣಿಕವಾಗಿ ನಮೂದಿಸಿ, ಹಾಜರಿರದ ವಿದ್ಯಾರ್ಥಿಗಳ ಹಾಜರಾತಿಯನ್ನು ನಮೂದಿಸಬೇಡಿ. ಕರ್ತವ್ಯದಲ್ಲಿ ಪ್ರಾಮಾಣಿಕತೆಯಿರಲಿ ಎಂದರು.
ನಿಲಯದ ಕೂಲಂಕಷ ಪರಿಶೀಲನೆ ನಡೆಸಿ, ಶೌಚಾಲಯಗಳಲ್ಲಿ ಕಿತ್ತುಹೋಗಿರುವ ಬೋಲ್ಟ್‌ಗಳನ್ನು ದುರಸ್ತಿ ಪಡಿಸಿ. ಹೆಣ್ಣುಮಕ್ಕಳ ವಸತಿ ನಿಲಯವಾಗಿರುವುದರಿಂದ ಇಂತಹ ಸಣ್ಣಪುಟ್ಟ ಸಂಗತಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕೆಂದರು.
ಈ ಸಂದರ್ಭದಲ್ಲಿ ತಾಪಂ ಸದಸ್ಯರಾದ ಎಂ.ಎಂ. ಜಗದೀಶ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣಪ್ಪ, ರೈತಮೋರ್ಚಾ ಜಿಲ್ಲಾ ಕಾರ್ಯದರ್ಶಿ ಶರತ್ ಕುಮಾರ್, ಶ್ರೀನಿವಾಸಮೂರ್ತಿ, ಚೇತನ್‌ಕುಮಾರ್, ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.