ಪ್ರಾದೇಶಿಕ ಸಾರಿಗೆ ಇಲಾಖೆ ಮಧುಗಿರಿಗೆ ವರ್ಗಾವಣೆ: ಆಕ್ರೋಶ
ಶಿರಾ: ಪ್ರಾದೇಶಿಕ ಸಾರಿಗೆ ಇಲಾಖೆಯನ್ನು ಮಧುಗಿರಿಗೆ ವರ್ಗಾಯಿಸಿರುವುದನ್ನು ಖಂಡಿಸಿ ಶಿರಾ ತಾಲೂಕು ಆಟೋ ಚಾಲಕರ ಕಲ್ಯಾಣ ಜಂಟಿ ಕ್ರಿಯಾ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ, ಭಗತ್ಕ್ರಾಂತಿ ಸೇನೆ, ಜಯಕರ್ನಾಟಕ ಹಾಗೂ ತಾಲೂಕು ಹಿರಿಯ ನಾಗರಿಕ ವೇದಿಕೆ, ಆಟೋ ಚಾಲಕರ ಮತ್ತು ಮ್ಯಾಕ್ಸಿಕ್ಯಾಬ್ ಮತ್ತಿತರ ಸಂಘಟನೆಗಳು ಆಕ್ಷೇಪಿಸಿವೆ.
ಶಿರಾ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಸಂಘಟನೆಗಳು ಪತ್ರಿಕಾಗೋಷ್ಠಿ ಕರೆದು ಮಾತನಾಡಿ ಈ ಹಿಂದೆ ಜಿಲ್ಲಾ ಕೇಂದ್ರವಾದ ತುಮಕೂರಿನಲ್ಲಿ ಎ.ಆರ್.ಟಿ.ಓ ಕಚೇರಿಗೆ ಹೋಗಿ ನಮ್ಮ ವಾಹನಕ್ಕೆ ಸಂಬಂಧಿಸಿದ ಹಾಗೂ ಇತರೆ ಕೆಲಸಗಳನ್ನು ಒಟ್ಟಿಗೆ ಮಾಡಿಕೊಂಡು ಬರುತ್ತಿದ್ದೆವು. ಆದರೆ ಈಗ ಎ.ಆರ್.ಟಿ.ಓ. ಕಚೇರಿಯನ್ನು ಮಧುಗಿರಿಗೆ ವರ್ಗಾಯಿಸಿರುವುದರಿಂದ ನಮ್ಮ ಕೆಲಸಗಳು ವಿಳಂಬವಾಗುತ್ತವೆ ಮತ್ತು ಹೆಚ್ಚು ಹಣ ಖರ್ಚಾಗುತ್ತದೆ ಎಂದು ಆರೋಪಿಸಿದವು.
ಮಧುಗಿರಿಯಲ್ಲಿ ಎ.ಆರ್.ಟಿ.ಓ. ಕಚೇರಿ ತೆರೆಯಲು ನಮ್ಮ ಅಕ್ಷೇಪಣೆಗಳೆನಿಲ.್ಲ ಆದರೆ ಶಿರಾ ತಾಲೂಕಿನ ವಾಹನಗಳ ದಾಖಲಾತಿಗಳಿಗೆ ಸಂಬಂಧಿಸಿದಂತೆ ತುಮಕೂರಿನಲ್ಲೆ ಮಾಡಿಕೊಳ್ಳಲು ಅವಕಾಶ ಕೊಡಿ. ಇಲ್ಲವೇ ಶಿರಾದಲ್ಲೇ ಒಂದು ಎ.ಆರ್.ಟಿ.ಓ. ಕಚೇರಿ ತೆರೆಯಿರಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಬಂಧಪಟ್ಟ ಸಾರಿಗೆ ಸಚಿವರನ್ನು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಆಟೋ ಚಾಲಕರ ಕಲ್ಯಾಣ ಸಮಿತಿ ಅಧ್ಯಕ್ಷ ಜೆ. ಸಿದ್ದೇಶ್ವರ, ಕರವೇ ಅಧ್ಯಕ್ಷ ನಾಗರಾಜು, ಉಪಾಧ್ಯಕ್ಷ ಪವನ್, ಸಿಕಂದರ್, ಚಿಕ್ಕಣ್ಣ, ಅತಾವುಲ್ಲಾ, ಕರಿಬಸವಯ್ಯ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

