ಯುವಕರು ಕ್ರೀಡಾ ಸ್ಫೂರ್ತಿ ಬೆಳೆಸಿಕೊಳ್ಳಲಿ
ಶಿರಾ: ರಾಷ್ಟ್ರಭಕ್ತಿ, ರಾಷ್ಟ್ರ ಪ್ರೇಮ, ಭಾವೈಕ್ಯತೆ ಮೂಡಲು ಕ್ರೀಡೆಯಿಂದ ಮಾತ್ರ ಸಾಧ್ಯ, ಯುವಕರು ಕ್ರೀಡಾ ಸ್ಫೂರ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಸಂಸದ ಜನಾರ್ದನ ಸ್ವಾಮಿ ತಿಳಿಸಿದರು. ಅವರು ತಾಲೂಕು ಬಿಜೆಪಿ ಯುವ ಮೋರ್ಚಾ ಘಟಕದ ವತಿಯಿಂದ ಮಾಜಿ ಪ್ರಧಾನಿ ವಾಜಪೇಯಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಟೆನ್ನಿಸ್ಬಾಲ್ ಕ್ರಿಕೆಟ್ ಟೂರ್ನಿ ಪೈನಲ್ ಪಂದ್ಯದಲ್ಲಿ ವಿಜೇತ ತಂಡಕ್ಕೆ ಬಹುಮಾನ ವಿತರಿಸಿ ಮಾತನಾಡಿದರು. ಯುವಕರು ರಾಷ್ಟ್ರ ಜಾಗೃತಿಯ ಬಗ್ಗೆ ಅರಿವು ಮೂಡಿಸಿ, ದೇಶ ಕಟ್ಟುವ ಕೆಲಸದಲ್ಲಿ ಪಾಲ್ಗೊಂಡಾಗ ಮಾತ್ರ ವಾಜಪೇಯಿ ಕಂಡ ಸದೃಢ, ಸಶಕ್ತ, ಬಲಿಷ್ಠ ರಾಷ್ಟ್ರ ನಿರ್ಮಾಣ ವಾಗಲು ಸಾಧ್ಯ ಎಂದರು.
ಟೂರ್ನಿಯಲ್ಲಿ ಜೈ ಭೀಮ್ ತಂಡ ಫೈನಲ್ನಲ್ಲಿ ಜಯಗಳಿಸಿತು. ಹಾಗೂ ದ್ವೀತಿಯ ಬಹುಮಾನ ವಂದೇ ಮಾತರಂ ತಂಡಕ್ಕೆ ವಾಜಪೇಯಿ ಕಪ್ ಹಾಗೂ ಬಹುಮಾನ ನೀಡಲಾಯಿತು ಬಹುಮಾನ ವಿತರಣೆ ಸಮಾರಂಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ್ಗೌಡ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಅಧ್ಯಕ್ಷ ಬಿ.ಕೆ.ಮಂಜುನಾಥ್, ಕಗ್ಗಲಡು ರಾಜಶೇಖರ್, ಕೃಷ್ಣಮೂರ್ತಿ, ಕದ್ರಿಹಳ್ಳಿ ಮೂರ್ತಿ, ತಾ.ಯುವ ಮೋರ್ಚಾ ಅಧ್ಯಕ್ಷ ಎಮ್ಮೆರಹಳ್ಳಿ ಮಂಜುನಾಥ್, ಧರಣಿ ಕುಮಾರ್, ಗಿರಿಧರ್, ಹನುಮಂತನಾಯ್ಕ ಮುಂತಾದವರು ಪಾಲ್ಗೊಂಡಿದ್ದರು.
ಪಾಪಣ್ಣನವರಿಗೆ 31 ರಂದು ಅಭಿನಂದನೆ
ತುಮಕೂರು: ಇಲ್ಲಿಗೆ ಸಮೀಪದ ಚಿಕ್ಕಣ್ಣಸ್ವಾಮಿ ಕ್ಷೇತ್ರದ ಪ್ರಧಾನ ಅರ್ಚಕ ಪಾಪಣ್ಣ ಅವರು 40 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದೇ ತಿಂಗಳ 31 ರಂದು ಸಂಜೆ 5.30 ಕ್ಕೆ ಚಿಕ್ಕಣ್ಣದೇವರಹಟ್ಟಿಯಲ್ಲಿ ಅಭಿನಂದನಾ ಸಮಾರಂಭ ಹಾಗೂ ಸಮಾಜದ ಮುಖಂಡರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಸಸಿ ನೆಡುವ ಕಾರ್ಯಕ್ರಮ, ಕರ್ನಾಟಕ ನವಚೇತನ ಶಾಲೆಯ ಅಂಧ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆ, ಬೆಂಗಳೂರಿನ ಪವಿತ್ರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಕುಣಿಗಲ್ ತಾಲೂಕು ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘ, ಚಿಕ್ಕಣ್ಣಸ್ವಾಮಿ ಧರ್ಮದರ್ಶಿ ಸೇವಾ ಟ್ರಸ್ಟ್ ಹಾಗೂ ಹೆಬ್ಬೂರಿನ ಪಾಪಣ್ಣನವರ ಅಭಿಮಾನಿ ಬಳಗವದರಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

