ನಿಗಮ, ಮಂಡಳಿಗೆ ನೇಮಿಸಲು ಆಗ್ರಹ
ತುಮಕೂರು: ಕಾಂಗ್ರೆಸ್ನಲ್ಲಿ ದುಡಿಯುತ್ತಿರುವ ಪರಿಶಿಷ್ಟ ಜಾತಿ ವಿಭಾಗದ ಮುಖಂಡರಿಗೆ ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಸಂದರ್ಭದಲ್ಲಿ ಸೂಕ್ತ ಸ್ಥಾನಮಾನ ಒದಗಿಸುವ ಕುರಿತು ಕೆಪಿಸಿಸಿಗೆ ಹಾಗೂ ಜಿಲ್ಲಾಧ್ಯಕ್ಷರಿಗೆ ಮನವಿ ಸಲ್ಲಿಸಲು ತುಮಕೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ತುಮಕೂರು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಬ್ಲಾಕ್ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳ ಸಭೆ ನಗರದ ಶೆಟ್ಟಿಹಳ್ಳಿ ಮುಖ್ಯರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್. ರಾಮಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಪರಿಶಿಷ್ಟ ಜಾತಿ ಘಟಕದ ಪದಾಧಿಕಾರಿಗಳನ್ನು ಚುನಾವಣೆಗೆ ಸಜ್ಜುಗೊಳಿಸುವ ಹಿನ್ನೆಲೆಯ ಜನವರಿ 6 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ರಾಜ್ಯಮಟ್ಟದ ಪದಾಧಿಕಾರಿಗಳ ಸಮಾವೇಶದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ್ದು ತುಮಕೂರು ಜಿಲ್ಲೆಯಿಂದ ಅತಿ ಹೆಚ್ಚು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸುವಂತೆ ಪದಾಧಿಕಾರಿಗಳಲ್ಲಿ ಮನವಿ ಮಾಡಿದರು.
ಜನವರಿ 6 ರಂದು ನಡೆಯುವ ಪರಿಶಿಷ್ಟ ಜಾತಿ ವಿಭಾಗದ ಪಾದಾಧಿಕಾರಿಗಳ ಬೃಹತ್ ಸಮಾವೇಶವನ್ನು ಎಐಸಿಸಿಯ ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರಾಧ್ಯಕ್ಷ ಕೆ.ರಾಜು ಉದ್ಘಾಟಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅಧ್ಯಕ್ಷತೆ ವಹಿಸುವರು. ರಾಜ್ಯದ ಮೂಲೆ ಮೂಲೆಗಳಿಂದ ಐವತ್ತು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರ ಈ ಸಮಾವೇಶದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ಕೆಪಿಸಿಸಿ ಪರಿಶಿಷ್ಟ ಜಾತಿವಿಭಾಗದ ಅಧ್ಯಕ್ಷ ಎನ್. ಮಂಜುನಾಥ್ ಅವರಿಗೂ ರಾಜ್ಯಮಟ್ಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕೆಂದು ಹಲವರು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

